alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದ ಕಿಚ್ಚನ ನಡೆ, ಸಿ.ಎಂ. ಭೇಟಿ ಮಾಡಿ ಚರ್ಚೆ

3 ದಿನಗಳ ಹಿಂದೆಯಷ್ಟೇ ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ನಟ ಕಿಚ್ಚ ಸುದೀಪ್, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ. ಅಧಿಕೃತ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸುದೀಪ್, 1 ಗಂಟೆಗೂ ಅಧಿಕ ಕಾಲ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸುವಂತೆ ಸಿ.ಎಂ. ಸಲಹೆ ನೀಡಿದ್ದು, ಇದೀಗ ಸುದೀಪ್ ನಡೆ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ವಿಧಾನಸಭೆ ಚುನಾವಣೆ ವೇಳೆಯಲ್ಲಿ 3 ದಿನಗಳ ಅಂತರದಲ್ಲಿ ಸುದೀಪ್, ಜೆ.ಡಿ.ಎಸ್. ಹಾಗೂ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸುದೀಪ್ ಕಾಂಗ್ರೆಸ್ ಪರ ಪ್ರಚಾರ ನಡೆಸ್ತಾರಾ? ಅಥವಾ ಜೆ.ಡಿ.ಎಸ್. ಅಭ್ಯರ್ಥಿಗಳ ಪರ ಪ್ರಚಾರ ನಡೆಸ್ತಾರಾ? ಇಲ್ಲವೇ ರಾಜಕೀಯದಿಂದ ದೂರ ಉಳಿಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...