alex Certify
ಕನ್ನಡ ದುನಿಯಾ       Mobile App
       

Kannada Duniya

ಹೊರಬಿತ್ತು ಸುದೀಪ್ ‘ಪೈಲ್ವಾನ್’ ಚಿತ್ರದ ಮತ್ತೊಂದು ಮಾಹಿತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ, ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಭರ್ಜರಿ ಯಶಸ್ಸಿನ ನಂತರ, ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಪೈಲ್ವಾನ್’ ಭಾರೀ ಕುತೂಹಲ ಮೂಡಿಸಿದೆ.

ಸುದೀಪ್ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಈ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಹಾಗೂ ಪೈಲ್ವಾನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಬಾಕ್ಸರ್ ಪಾತ್ರಕ್ಕಾಗಿ ಅಗತ್ಯ ತಯಾರಿ ಮಾಡಿಕೊಳ್ಳಲಿರುವ ಸುದೀಪ್, ನುರಿತ ಬಾಕ್ಸರ್ ಗಳಿಂದ ತರಬೇತಿಯನ್ನು ಪಡೆಯಲಿದ್ದಾರೆ. ನಿರ್ದೇಶಕ ಕೃಷ್ಣ ಈಗಾಗಲೇ 2 ಕ್ರೀಡಾ ತರಬೇತಿ ಸಂಸ್ಥೆಗಳನ್ನು ಸಂಪರ್ಕಿಸಿದ್ದಾರೆ.

ಇನ್ನು ಚಿತ್ರದಲ್ಲಿ ನಾಯಕಿಯದು ಪ್ರಮುಖವಾದ ಪಾತ್ರವಾಗಿದ್ದು, ನಾಯಕಿಯ ಸುತ್ತವೇ ಕತೆ ಸಾಗಲಿದೆ. ಅಂದ ಹಾಗೇ ಇನ್ನೂ ನಾಯಕಿಯನ್ನು ಗೊತ್ತು ಮಾಡಿಲ್ಲ. ಈಗಾಗಲೇ ಹಲವರ ಹೆಸರನ್ನು ಪರಿಗಣಿಸಲಾಗಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು.

ಕರ್ನಾಟಕದ ವಿವಿಧೆಡೆ ಮತ್ತು ವಿದೇಶದಲ್ಲಿ ಸಾಹಸ ನಿರ್ದೇಶಕ ರವಿವರ್ಮ ಸಾರಥ್ಯದಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಅಕ್ಟೋಬರ್ ಮೊದಲ ವಾರದಿಂದ ‘ಪೈಲ್ವಾನ್’ ಚಿತ್ರೀಕರಣ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...