alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಚ್ಚನ ಎಂಟ್ರಿಯಿಂದ ಹೆಚ್ಚಿದೆ ಕುತೂಹಲ

sudep-raju-kan

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೊಸಬರ ಪ್ರಯತ್ನಕ್ಕೆ ಸದಾ ಪ್ರೋತ್ಸಾಹ ನೀಡುತ್ತಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಮಿಂಚಿರುವ ಅವರು, ಹಾಲಿವುಡ್ ಹಾಗೂ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ.

ಹೊಸ ವಿಷಯವೇನೆಂದರೆ, ಸುದೀಪ್ ‘ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಫಸ್ಟ್ ರ್ಯಾಂಕ್ ರಾಜು’ ಚಿತ್ರತಂಡದಿಂದ ‘ರಾಜು ಕನ್ನಡ ಮೀಡಿಯಂ’ ಚಿತ್ರ ಮೂಡಿ ಬರುತ್ತಿದ್ದು, ಇದರಲ್ಲಿ ಸುದೀಪ್ ಶ್ರೀಮಂತ ಉದ್ಯಮಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

7 ವೆರೈಟಿ ಗೆಟಪ್ ನಲ್ಲಿ ಸುದೀಪ್ ಕಾಣಿಸಿಕೊಂಡಿದ್ದು, ಗಾಲ್ಫ್ ಆಡುವ ಮೂಲಕ ಸ್ಪೋರ್ಟ್ಸ್ ಪರ್ಸನಾಲಿಟಿಯಲ್ಲಿ ಮಿಂಚಿದ್ದಾರೆ.

ಸುದೀಪ್ ಎಂಟ್ರಿಯಿಂದಾಗಿ ‘ರಾಜು ಕನ್ನಡ ಮೀಡಿಯಂ’ ಚಿತ್ರದ ಬಗೆಗಿನ ಕುತೂಹಲ ಹೆಚ್ಚಾಗಿದೆ. ನರೇಶ್ ಕುಮಾರ್ ನಿರ್ದೇಶನ, ಕೆ.ಎ. ಸುರೇಶ್ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ.

ಕಿರಣ್ ರವೀಂದ್ರನಾಥ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣ ಚಿತ್ರಕ್ಕಿದ್ದು, ಗುರುನಂದನ್, ಆವಂತಿಕಾ ಶೆಟ್ಟಿ, ಆಶಿಕಾ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...