alex Certify
ಕನ್ನಡ ದುನಿಯಾ       Mobile App
       

Kannada Duniya

ಸುದೀಪ್ ಚಿತ್ರ ನಿರ್ದೇಶಿಸಲಿದ್ದಾರೆ ರಕ್ಷಿತ್ ಶೆಟ್ಟಿ

sudeep

ಬಹುಭಾಷಾ ನಟ ಕಿಚ್ಚ ಸುದೀಪ್ ನಟನೆ ಮಾತ್ರವಲ್ಲದೇ, ನಿರ್ಮಾಣ, ನಿರ್ದೇಶನದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಸುದೀಪ್, ಮತ್ತೊಬ್ಬ ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಕಾಲ್ ಶೀಟ್ ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ನಟರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರೂ, ‘ಉಳಿದವರು ಕಂಡಂತೆ’ ಚಿತ್ರ ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಹೀಗೆ ನಟನೆ ಮತ್ತು ನಿರ್ದೇಶನದಲ್ಲಿ ಯಶಸ್ಸು ಕಂಡಿರುವ ಸುದೀಪ್ ಮತ್ತು ರಕ್ಷಿತ್ ಶೆಟ್ಟಿ ಒಂದಾಗುತ್ತಿದ್ದಾರೆ.

‘ಥಗ್ಸ್ ಆಫ್ ಮಾಲ್ಗುಡಿ’ ಹೆಸರಿನ ಚಿತ್ರವನ್ನು ರಕ್ಷಿತ್ ಶೆಟ್ಟಿ ನಿರ್ದೇಶಿಸಲಿದ್ದು, ಸುದೀಪ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ‘ಹೆಬ್ಬುಲಿ’ಯಲ್ಲಿ ಬ್ಯುಸಿಯಾಗಿರುವ ಸುದೀಪ್, ನಂತರದಲ್ಲಿ ಮತ್ತೊಂದು ಚಿತ್ರದಲ್ಲಿ ಅಭಿನಯಿಸಲಿದ್ದು, ಅದಾದ ಬಳಿಕ ರಕ್ಷಿತ್ ಶೆಟ್ಟಿ ನಿರ್ದೇಶನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...