alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ಮಲ್ಟಿಸ್ಟಾರ್ ಚಿತ್ರದಲ್ಲಿ ಕಿಚ್ಚ ಸುದೀಪ್

sudeep-and-ravichandran-02

ಬಾಲಿವುಡ್ ಚಿತ್ರರಂಗಕ್ಕೆ ಹೋಲಿಸಿದರೆ ಸೌತ್ ಇಂಡಿಯಾದಲ್ಲಿ ಮಲ್ಟಿಸ್ಟಾರ್ ಚಿತ್ರಗಳು ಕಡಿಮೆಯೇ. ಇತ್ತೀಚೆಗೆ ಇಲ್ಲಿಯೂ ಮಲ್ಟಿಸ್ಟಾರ್ ಚಿತ್ರಗಳು ನಿರ್ಮಾಣವಾಗುತ್ತಿವೆ. ಸ್ಯಾಂಡಲ್ ವುಡ್ ನಲ್ಲಿಯೂ ಮಲ್ಟಿಸ್ಟಾರ್ ಸಿನೆಮಾಗಳು ಹಿಂದಿಗಿಂತ ಹೆಚ್ಚಾಗತೊಡಗಿವೆ ಎನ್ನಬಹುದು.

ಬಹು ಭಾಷಾ ನಟ ಕಿಚ್ಚ ಸುದೀಪ್ ಮಲ್ಟಿಸ್ಟಾರ್ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಮುಂದಾಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರೊಂದಿಗೆ ‘ಕಲಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ಜೋಗಿ’ ಪ್ರೇಮ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅದರೊಂದಿಗೆ ಸುದೀಪ್ ಬಾಲಿವುಡ್ ನ ‘ಓ ಮೈ ಗಾಡ್’ ಕನ್ನಡ ಅವತರಣಿಕೆಯ ‘ಮುಕುಂದ ಮುರಾರಿ’ಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ನಟಿಸಲಿದ್ದಾರೆ. ಹೀಗೆ ಸುದೀಪ್ ಮಲ್ಟಿಸ್ಟಾರ್ ಚಿತ್ರಗಳಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರೊಂದಿಗೆ ‘ಮಾಣಿಕ್ಯ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಸುದೀಪ್, ‘ಹೆಬ್ಬುಲಿ’ಯಲ್ಲಿಯೂ ಜೊತೆಯಾಗಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ನಟಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ, ಅಧಿಕೃತಗೊಂಡಿರಲಿಲ್ಲ. ‘ಹೆಬ್ಬುಲಿ’ ನಿರ್ದೇಶಕ ಕೃಷ್ಣ ನೀಡಿರುವ ಮಾಹಿತಿಯಂತೆ ಸುದೀಪ್ ಚಿತ್ರದಲ್ಲಿ ರವಿಚಂದ್ರನ್ ನಟಿಸುವುದು ಪಕ್ಕಾ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...