alex Certify
ಕನ್ನಡ ದುನಿಯಾ       Mobile App
       

Kannada Duniya

‘ದಿ ವಿಲನ್’ ಶೂಟಿಂಗ್ ಸ್ಪಾಟ್ ನಲ್ಲಿ ಪ್ರಿಯಾ ಸುದೀಪ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ದಿ ವಿಲನ್’ ಚಿತ್ರೀಕರಣ ಭರದಿಂದ ಸಾಗಿದೆ.

ಈಗಾಗಲೇ ಶಿವಮೊಗ್ಗ ಜೈಲ್, ಬೆಳಗಾವಿಯ ರಾಮದುರ್ಗ ಸೇರಿದಂತೆ ವಿದೇಶಗಳಲ್ಲಿಯೂ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕಮಗಳೂರಿನಲ್ಲಿ ಸುದೀಪ್, ಎಮಿ ಜಾಕ್ಸನ್ ಪಾಲ್ಗೊಂಡಿರುವ ದೃಶ್ಯಗಳು ಹಾಗೂ ಫೈಟಿಂಗ್ ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ.

ಚಿತ್ರೀಕರಣ ಸ್ಥಳಕ್ಕೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಆಗಮಿಸಿದ್ದಾರೆ. ಚಿಕ್ಕಮಗಳೂರಿನ ಹಸಿರ ಸಿರಿಯ ನಡುವೆ ‘ದಿ ವಿಲನ್’ ಚಿತ್ರೀಕರಣ ನಡೆಯುತ್ತಿದ್ದು, ಪ್ರಿಯಾ ಸುದೀಪ್ ಚಿತ್ರತಂಡದೊಂದಿಗೆ ಕೆಲ ಸಮಯವನ್ನು ಕಳೆದಿದ್ದಾರೆ.

ಸುದೀಪ್ ದಂಪತಿ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು.

ಇತ್ತೀಚೆಗೆ ಸಿ.ಸಿ.ಎಲ್. ಕ್ರಿಕೆಟಿಗರೊಬ್ಬರ ಹೋಟೆಲ್ ಉದ್ಘಾಟನೆಗೆ ಸುದೀಪ್ ದಂಪತಿ ಸಮೇತರಾಗಿ ಆಗಮಿಸಿದ್ದರು. ಅಲ್ಲದೇ, ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳದ ಕಾರಣ, ಅವರ ಅಭಿಮಾನಿಗಳು ಸಾಮಾಜಿಕ ಕಾರ್ಯದ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಕಾರ್ಯಕ್ರಮಕ್ಕೆ ಪ್ರಿಯಾ ಸುದೀಪ್ ಅವರು ಆಗಮಿಸಿದ್ದು ವಿಶೇಷವಾಗಿತ್ತು.

ಈಗ ಚಿಕ್ಕಮಗಳೂರಿನಲ್ಲಿ ‘ದಿ ವಿಲನ್’ ತಂಡದೊಂದಿಗೆ ಅವರು ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...