alex Certify
ಕನ್ನಡ ದುನಿಯಾ       Mobile App
       

Kannada Duniya

ಸನ್ನಿ ಲಿಯೋನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ ಸನ್ನಿ ಲಿಯೋನ್ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಕಾಶಿಪುರದ ಕೃಷ್ಣ ಆಸ್ಪತ್ರೆಯಲ್ಲಿ ಸನ್ನಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಸನ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಜೂನ್ 3 ರಿಂದ ಸನ್ನಿ ಲಿಯೋನ್ ಉತ್ತರಾಖಂಡದ ರಾಮನಗರದಲ್ಲಿದ್ದಳು. ಸ್ಪ್ಲಿಟ್ಸ್ವಿಲ್ಲಾ -11 ಶೂಟಿಂಗ್ ನಲ್ಲಿ ಸನ್ನಿ ಬ್ಯುಸಿಯಿದ್ದಳು. ಶೂಟಿಂಗ್ ವೇಳೆ ಅಚಾನಕ್ ಸನ್ನಿ ಆರೋಗ್ಯದಲ್ಲಿ ಏರುಪೇರಾಗಿದೆ. ಆಕೆಯನ್ನು ರಾಮನಗರದ ಬ್ರಿಜೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಕಾಶಿಪುರದ ಕೃಷ್ಣಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. 2-3 ದಿನಗಳ ಕಾಲ ಚಿಕಿತ್ಸೆ ಅಗತ್ಯವಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಆಸ್ಪತ್ರೆಯಿಂದ ಬಿಡುಗಡೆ ಸಿಗಲಿದೆ ಎಂದು ವೈದ್ಯರು ಹೇಳಿದ್ದಾರೆ. ಬ್ರಿಜೇಶ್ ಆಸ್ಪತ್ರೆಯಲ್ಲಿ ಸನ್ನಿ ದಾಖಲಾಗಿದ್ದಾಳೆಂಬ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ಅಭಿಮಾನಿಗಳ ದಂಡು ನೆರೆದಿತ್ತು. ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...