alex Certify
ಕನ್ನಡ ದುನಿಯಾ       Mobile App
       

Kannada Duniya

ಸನ್ನಿ ಲಿಯೊನ್ ಅಭಿಮಾನಿಗಳಿಗೆ ಇಲ್ಲಿದೆ ಒಂದು ಸುದ್ದಿ

ಬೆಂಗಳೂರು: ಡಿಸೆಂಬರ್ 31 ರಂದು ಟೈಮ್ಸ್ ಕ್ರಿಯೇಷನ್ ಸಂಸ್ಥೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ. ಸರ್ಕಾರ ಅನುಮತಿ ನೀಡದ ಕಾರಣ, ಟೈಮ್ಸ್ ಕ್ರಿಯೇಷನ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ.

ಹೊಸ ವರ್ಷಾಚರಣೆ ಪ್ರಯುಕ್ತ ಆಯೋಜಿಸಿದ್ದ ಸನ್ನಿ ಲಿಯೊನ್ ಕಾರ್ಯಕ್ರಮವನ್ನು ರದ್ದುಪಡಿಸಬೇಕೆಂದು ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಭಾರೀ ವಿರೋಧ ವ್ಯಕ್ತವಾದ ಕಾರಣದಿಂದ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ.

ಬೆಂಗಳೂರಿನಲ್ಲಿ ತಮ್ಮ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ಮತ್ತು ಅನುಮತಿ ಸಿಗದಿರುವುದರಿಂದ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಬರದಿರಲು ತೀರ್ಮಾನಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಬೆಂಗಳೂರಿನ ಕಾರ್ಯಕ್ರಮಕ್ಕೆ ನಾನು ಬರುತ್ತಿಲ್ಲ. ನಾನು ಎಲ್ಲರ ಸುರಕ್ಷತೆಗೆ ಆದ್ಯತೆ ನೀಡುತ್ತೇನೆ. ಕಾರ್ಯಕ್ರಮಕ್ಕೆ ಬರುವವರಿಗೆ ಏನೂ ಆಗಬಾರದು. ಸುರಕ್ಷತೆಯ ಕಾರಣದಿಂದ ಅನುಮತಿ ನೀಡಿಲ್ಲ. ನಾನು ಕಾರ್ಯಕ್ರಮಕ್ಕೆ ಬರುವ ಎಲ್ಲರ ಸುರಕ್ಷತೆ ಬಯಸುತ್ತೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿದ್ದಾರೆ. ಇದರಿಂದಾಗಿ ಸನ್ನಿ ಆಗಮನದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...