alex Certify
ಕನ್ನಡ ದುನಿಯಾ       Mobile App
       

Kannada Duniya

ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ರಾಜಧಾನಿ ಬೆಂಗಳೂರಲ್ಲಿ ಮಾದಕ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮಕ್ಕೆ ಮತ್ತೊಮ್ಮೆ ಕನ್ನಡ ಪರ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿರುವುದರಿಂದ, ಬಿಗಿ ಭದ್ರತೆ ನಡುವೆ ಕಾರ್ಯಕ್ರಮ ನಡೆಸಲು ಸಜ್ಜಾಗಿದ್ದಾರೆ.

ಅ.3 ನಾಗವಾರದ ಸಮೀಪವಿರುವ ರೆಸಾರ್ಟ್ ನಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ನೃತ್ಯ ಮಾಡಲಿರುವ ಸನ್ನಿ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವ ಎಚ್ಚರಿಕೆ ನೀಡಿದೆ.

ಆದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಆಯೋಜಕರೊಂದಿಗೆ ಸಭೆ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಭಾಗವಹಿಸಲಿದ್ದಾರೆ ಎನ್ನುವ‌ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಾರ್ಯಕ್ರಮದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನವೆಂಬರ್ ತಿಂಗಳಲ್ಲಿ ಕನ್ನಡ ಪರ ಕಾರ್ಯಕ್ರಮ ನಡೆಸಬೇಕು ಎಂದು ಆಗ್ರಹಿಸಿರುವ ಕನ್ನಡ ಪರ ಸಂಘಟನೆಗಳು, ರಾಜ್ಯದ ಸಂಸ್ಕೃತಿ, ಭಾಷೆ ಉಳಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದಿದ್ದಾರೆ. ಆದ್ದರಿಂದ ಇಡೀ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...