alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀದೇವಿ ಸಾವಿನ ಪ್ರಕರಣದ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

ಫೆಬ್ರವರಿ 24 ರಂದು ದುಬೈನ ಹೋಟೆಲ್ ನಲ್ಲಿ ಸಾವನ್ನಪ್ಪಿದ ಖ್ಯಾತ ಬಾಲಿವುಡ್ ನಟಿ ಶ್ರೀದೇವಿಯವರ ಸಾವು ಅನುಮಾನಾಸ್ಪದವಾಗಿದ್ದು, ಈ ಕುರಿತು ತನಿಖೆ ನಡೆಸಬೇಕೆಂದು ಕೋರಿ ನಿರ್ಮಾಪಕ ಸುನೀಲ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲವೆಂದು ಹೇಳಿದರಲ್ಲದೇ, ತಮ್ಮ ಆರೋಪ ಸಾಬೀತುಪಡಿಸಲು ಸೂಕ್ತ ದಾಖಲೆಗಳನ್ನು ಸಲ್ಲಿಸಲು ಸುನೀಲ್ ಸಿಂಗ್ ವಿಫಲರಾಗಿದ್ದಾರೆಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಈ ಹಿಂದೆಯೂ ಸುನೀಲ್ ಸಿಂಗ್, ಶ್ರೀದೇವಿಯವರ ಸಾವಿನ ತನಿಖೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿಯೂ ಅರ್ಜಿ ವಜಾಗೊಂಡಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈಗ ಸುಪ್ರೀಂ ಕೋರ್ಟ್ ಕೂಡಾ ಅರ್ಜಿ ವಜಾಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...