alex Certify
ಕನ್ನಡ ದುನಿಯಾ       Mobile App
       

Kannada Duniya

ನಾಗಾಲ್ಯಾಂಡ್ ಪ್ರವಾಹ ಸಂತ್ರಸ್ತರ ನೆರವಿಗೆ 1.25 ಕೋಟಿ ರೂ. ನೀಡಿದ ನಟ

ನೆರೆ ಪೀಡಿತ ಕೇರಳ ರಾಜ್ಯಕ್ಕೆ, ನಟ ಸುಶಾಂತ್ ಸಿಂಗ್ ರಜಪೂತ್ ಒಂದು ಕೋಟಿ ರೂ. ನೀಡಿದ್ದು ಗೊತ್ತಿರುವ ವಿಚಾರ. ನಾಗಾಲ್ಯಾಂಡ್ ಪ್ರವಾಹ ಪೀಡಿತರಿಗೂ ನಟ ತಮ್ಮ ಕೈಲಾದ ಸಹಾಯ ಮಾಡಿ, ಅಭಿಮಾನಿಗಳ ಮನ ಗೆದ್ದಿದ್ದಾರೆ.

ಸುಶಾಂತ್ ನಾಗಾಲ್ಯಾಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೆ ಮುಖ್ಯ ಮಂತ್ರಿ ನೀಫಿಯು ರಿಯೊ ರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಕೋಟಿ ದೇಣಿಗೆ ನೀಡಿದ್ದಾರೆ. ಈ ಮೂಲಕ ರಿಯಲ್ ಲೈಫ್ ನಲ್ಲೂ ಸುಶಾಂತ್ ಹೀರೋ ರೀತಿ ಗುರುತಿಸಿಕೊಳ್ಳುತ್ತಿದ್ದಾರೆ.

ಸುಶಾಂತ್ ದೇಣಿಗೆ ನೀಡಿದ ಫೋಟೋವನ್ನು, ಮುಖ್ಯಮಂತ್ರಿ ನೀಫಿಯು ರಿಯೊ ಟ್ವಿಟರ್ ನಲ್ಲಿ ಹಾಕಿಕೊಂಡಿದ್ದಾರೆ. ಅಲ್ಲದೆ ಸುಶಾಂತ್ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ಪ್ರವಾಹದ ಹೊಡೆತಕ್ಕೆ 50 ಸಾವಿರ ಜನ ನಿರಾಶ್ರಿತರಾಗಿದ್ದಾರೆ. ಇನ್ನು ಪ್ರವಾಹ ಪೀಡಿತ ಪ್ರದೇಶಗಳ ದುರಸ್ಥಿ ಕಾರ್ಯಕ್ಕೆ ಸುಮಾರು 800 ಕೋಟಿ ಹಣ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...