alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರಾ ಮಿಲ್ಕಿ ಬ್ಯೂಟಿ ತಮನ್ನಾ?

‘ಬಾಹುಬಲಿ’ ಸಿನಿಮಾ ಖ್ಯಾತಿಯ ತಮನ್ನಾ, ಈ ವರ್ಷದ ಅಂತ್ಯದಲ್ಲಿ ಕನ್ನಡ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈಗಾಗಲೇ ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ಮಾಪಕರೊಬ್ಬರು ತಮ್ಮ ಚಿತ್ರದಲ್ಲಿ ನಟಿಸುವಂತೆ ತಮನ್ನಾ ಅವರನ್ನು ಸಂಪರ್ಕಿಸಿದ್ದಾರೆನ್ನಲಾಗಿದೆ.

ತಮನ್ನಾ, ಚಿನ್ನಾಭರಣ ಕುರಿತು ಜಾಹೀರಾತೊಂದರಲ್ಲಿ ಪುನೀತ್ ರಾಜಕುಮಾರ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಈ ಹಿಂದೆ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು.

ಸದ್ಯಕ್ಕೆ ತಮನ್ನಾ, ಹಿಂದಿ ಸಿನಿಮಾ ‘ಕ್ವೀನ್’ ನ ತೆಲುಗು ರಿಮೇಕ್ ನಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರವನ್ನು ಕನ್ನಡದ ಹಿರಿಯ ನಟ ರಮೇಶ್ ಅರವಿಂದ್ ನಿರ್ದೇಶಿಸಿದ್ದಾರೆ.

ತಮನ್ನಾ ಹಾಡಿನ ಚಿತ್ರೀಕರಣವೊಂದಕ್ಕಾಗಿ ಮೈಸೂರಿಗೆ ಬಂದಿದ್ದು, ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಭೇಟಿಯಾದ ಅವರು, ವರ್ಷದ ಕೊನೆಯಲ್ಲಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದೇನೆ ಎಂದು ಮಾತ್ರ ತಿಳಿಸಿದ್ದಾರೆ. ಆದರೆ ಯಾವ ಚಿತ್ರ ಎಂಬುದರ ಗುಟ್ಟು ಮಾತ್ರ ಬಿಟ್ಟು ಕೊಟ್ಟಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...