alex Certify
ಕನ್ನಡ ದುನಿಯಾ       Mobile App
       

Kannada Duniya

ದಸರಾ ಹಬ್ಬಕ್ಕೆ ದರ್ಶನ್ ಫ್ಯಾನ್ಸ್ ಗೆ ಡಬಲ್ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ತಾರಕ್’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ದರ್ಶನ್ ಅಭಿನಯದ 50 ನೇ ಚಿತ್ರ ‘ಕುರುಕ್ಷೇತ್ರ’ ಟೀಸರ್ ರಿಲೀಸ್ ಆಗಿದೆ.

ದಸರಾ ಹಬ್ಬದ ಸಂಭ್ರಮದಲ್ಲಿರುವ ದರ್ಶನ್ ಫ್ಯಾನ್ಸ್ ಗೆ ಖುಷಿ ಇಮ್ಮಡಿಸಿದೆ. ನೆಚ್ಚಿನ ನಟನ ಚಿತ್ರಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿದೆ. ಸಾಲು ಸಾಲು ರಜೆ ಇರುವುದರಿಂದ ಅಭಿಮಾನಿಗಳು, ಸಿನಿ ರಸಿಕರು ‘ತಾರಕ್’ ವೀಕ್ಷಣೆಗೆ ಮುಗಿಬಿದ್ದಿದ್ದಾರೆ.

‘ಕುರುಕ್ಷೇತ್ರ’ ಟೀಸರ್ ದಲ್ಲಿ ದರ್ಶನ್ ಡೈಲಾಗ್ ಇದ್ದು, ವೈಭವದ ದೃಶ್ಯಗಳು ಗಮನಸೆಳೆಯುವಂತಿವೆ. ಮುನಿರತ್ನ ನಿರ್ಮಾಣದಲ್ಲಿ, ನಾಗಣ್ಣ ನಿರ್ದೇಶನದಲ್ಲಿ ಚಿತ್ರ ಮೂಡಿಬರುತ್ತಿದ್ದು, ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.

ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರದಲ್ಲಿ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರ್ ಸೇರಿದಂತೆ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...