alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುತ್ತೆ ಅನುಷ್ಕಾಳ “ಪರಿ” ಚಿತ್ರದ ಟೀಸರ್

ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ಪತಿಯೊಂದಿಗೆ ದಕ್ಷಿಣ ಆಫ್ರಿಕಾಕ್ಕೆ ತೆರಳಿ ಬಳಿಕ ಮರಳಿ ಬಂದಿದ್ದಾರೆ.

ಪರಿ ಸೇರಿದಂತೆ ಕೆಲ ಚಿತ್ರಗಳಲ್ಲಿ ಅನುಷ್ಕಾ ಶರ್ಮಾ ಅಭಿನಯಿಸುತ್ತಿದ್ದು, ಚಿತ್ರೀಕರಣಕ್ಕಾಗಿ ಭಾರತಕ್ಕೆ ಬಂದಿದ್ದಾರೆ. ವಿವಾಹವಾದ ಬಳಿಕವೂ ಚಿತ್ರಗಳಲ್ಲಿ ನಟಿಸುವುದಾಗಿ ಅನುಷ್ಕಾ ಈ ಹಿಂದೆಯೇ ಹೇಳಿದ್ದು, ಅಭಿಮಾನಿಗಳು ಸಂತಸಗೊಂಡಿದ್ದಾರೆ.

‘ಪರಿ’ ಅನುಷ್ಕಾ ಶರ್ಮಾ ತಮ್ಮ ಸ್ವಂತ ಬ್ಯಾನರ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರವಾಗಿದ್ದು ಮಾರ್ಚ್ 2 ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಪರಿ ಹಾರರ್ ಚಿತ್ರವಾಗಿದ್ದು, ಈಗ ಬಿಡುಗಡೆಗೊಂಡಿರುವ ಅದರ ಟೀಸರ್ ಬೆಚ್ಚಿ ಬೀಳಿಸುವಂತಿದೆ. ಚಿತ್ರದ ಕುರಿತು ಪ್ರೇಕ್ಷಕರಲ್ಲಿ ಕುತೂಹಲ ಮೂಡಿದ್ದು, ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...