alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ಮುಂದೆ ಸಿನಿಮಾದಲ್ಲಿ ಮಿಂಚಲಿದ್ದಾರೆ ಲಾಲು ಪುತ್ರ

ಬಿಹಾರದ ಪ್ರಮುಖ ವಿರೋಧಿ ಪಕ್ಷ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್  ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ರಾಜಕಾರಣದ ನಂತ್ರ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ತೇಜ್ ಪ್ರತಾಪ್ ಯಾದವ್ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ.

ಈ ಚಿತ್ರದ ಹೆಸರು ರುದ್ರಾ ದ ಅವತಾರ್. ಈ ಪೋಸ್ಟರ್ ನಲ್ಲಿ ತೇಜ್ ಪ್ರತಾಪ್ ಯಾದವ್ ಹಿರೋನಂತೆ ಫೋಸ್ ನೀಡಿದ್ದಾರೆ. ಪೋಸ್ಟರ್ ನೋಡಿದ್ರೆ ತೇಜ್ ಪ್ರತಾಪ್ ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಿಸುತ್ತಿದೆ. ಮಾಜಿ ಆರೋಗ್ಯ ಸಚಿವ ಹಾಗೂ ಹಾಲಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರು ಕಲೆ-ಸಂಗೀತದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ತೇಜ್ ಪ್ರತಾಪ್ ಉತ್ತಮ ಕೊಳಲು ವಾದಕರೂ ಹೌದು.

ತೇಜ್ ಪ್ರತಾಪ್ ಯಾದವ್ ಕೆಲ ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ತಂದೆ ಚಿಕಿತ್ಸೆ ಹಿನ್ನೆಲೆಯಲ್ಲಿ ತೇಜ್ ಪ್ರತಾಪ್ ಮುಂಬೈನಲ್ಲಿದ್ದಾರೆ. ಹಾಗಾಗಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತೇಜ್ ಪ್ರತಾಪ್ ಪೋಸ್ಟರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...