alex Certify
ಕನ್ನಡ ದುನಿಯಾ       Mobile App
       

Kannada Duniya

4 ನಿಮಿಷ ಹೆಜ್ಜೆ ಹಾಕಿದ್ದಕ್ಕೆ ತಮನ್ನಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ‘ಕೆ.ಜಿ.ಎಫ್.’ ಚಿತ್ರ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಚಿತ್ರೀಕರಣ ಪೂರೈಸಿರುವ ಚಿತ್ರತಂಡ ಚಿತ್ರದ ಬಿಡುಗಡೆಯ ತಯಾರಿಯಲ್ಲಿದೆ.

ಈ ಚಿತ್ರದ ಹಾಡೊಂದರಲ್ಲಿ ‘ಬಾಹುಬಲಿ’ ಖ್ಯಾತಿಯ ನಟಿ ತಮನ್ನಾ ಸೊಂಟ ಬಳುಕಿಸಿದ್ದು, 4 ನಿಮಿಷ ಹೆಜ್ಜೆ ಹಾಕಲು ಮಿಲ್ಕಿ ಬ್ಯೂಟಿ, ಬರೋಬ್ಬರಿ 40 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ.

1970 ರಲ್ಲಿ ಬಿಡುಗಡೆಯಾಗಿದ್ದ ವರನಟ ಡಾ. ರಾಜಕುಮಾರ್ ಅಭಿನಯದ ‘ಪರೋಪಕಾರಿ’ ಚಿತ್ರದ ‘ಜೋಕೆ ನಾನು ಬಳ್ಳಿಯ ಮಿಂಚು’ ಹಾಡನ್ನು ‘ಕೆ.ಜಿ.ಎಫ್.’ ಚಿತ್ರದಲ್ಲಿ ಯಥಾವತ್ತಾಗಿ ಬಳಸಿಕೊಳ್ಳಲಾಗಿದ್ದು, ಇದಕ್ಕೆ ತಮನ್ನಾ ಹೆಜ್ಜೆ ಹಾಕಿದ್ದಾರೆ.

ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಅಭಿನಯದ ‘ಜಾಗ್ವಾರ್’ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಂಡಿದ್ದ ತಮನ್ನಾ, ಈಗ ‘ಕೆ.ಜಿ.ಎಫ್.’ ಚಿತ್ರದಲ್ಲಿ ಮತ್ತೊಮ್ಮೆ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್ ವುಡ್ ಸಿನಿಪ್ರೇಕ್ಷಕರನ್ನು ಎರಡನೇ ಬಾರಿ ಸೆಳೆಯಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...