alex Certify
ಕನ್ನಡ ದುನಿಯಾ       Mobile App
       

Kannada Duniya

ಅದ್ಧೂರಿಯಾಗಿ ರಿಲೀಸ್ ಆಯ್ತು ‘2.0’ ಫಸ್ಟ್ ಲುಕ್

2-0-rajani

ಮುಂಬೈ: ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಭಾರೀ ನಿರೀಕ್ಷೆಯ ‘ರೋಬೋ 2.0’ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ‘2.0’ ಫಸ್ಟ್ ಲುಕ್ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಿದ್ದು. ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ನಿರ್ದೇಶಕ ಶಂಕರ್, ನಟಿ ಆಮಿ ಜಾಕ್ಸನ್, ರಜನಿಕಾಂತ್, ಅಕ್ಷಯ್ ಕುಮಾರ್ ಮೊದಲಾದವರು ಚಿತ್ರದ ಬಗ್ಗೆ ಮಾತನಾಡಿದ್ದಾರೆ.

ಸುಮಾರು 360 ಕೋಟಿ ರೂ. ವೆಚ್ಛದಲ್ಲಿ ತಮಿಳು, ಹಿಂದಿ, ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ‘2.0’ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ. ರಜನಿಕಾಂತ್ ಅಭಿನಯದ ‘ರೋಬೋ’ ಚಿತ್ರದ ಮುಂದುವರೆದ ಭಾಗ ಇದಾಗಿದ್ದು, ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ. ಫಸ್ಟ್ ಲುಕ್ ಮೈನವಿರೇಳಿಸುವಂತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...