alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಕಾಂತ್ ಬರ್ತಡೇಯಿಂದ ದೂರವಿರಲು ಇದಂತೆ ಅಸಲಿ ಕಾರಣ

ಸೂಪರ್ ಸ್ಟಾರ್ ರಜನಿಕಾಂತ್ ಸೌತ್ ಸಿನಿ ದುನಿಯಾದಲ್ಲಿ ಮಾತ್ರವಲ್ಲ, ವಿಶ್ವದ ಬಹುತೇಕ ಭಾಗಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಡಿಸೆಂಬರ್ 12 ರಂದು ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸುತ್ತಾರೆ.

12-12-12 ರಂದು ರಜನಿಕಾಂತ್ ಅವರ 62 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿಶೇಷವಾಗಿ ಆಚರಿಸಿದ್ದರು. ಅದಾಗಿ ಅವರ ಹುಟ್ಟುಹಬ್ಬದ ಸಂದರ್ಭಗಳಲ್ಲಿ ಹೊಸ ಚಿತ್ರಗಳ ಬಿಡುಗಡೆ, ಟೀಸರ್, ಸಾಂಗ್ ಬಿಡುಗಡೆ ಮಾಡಲಾಗುತ್ತಿತ್ತು. ಕಳೆದ 3 ವರ್ಷಗಳಿಂದ ರಜನಿಕಾಂತ್ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದಾರೆ.

ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಿದರೂ ಅವರು ಮಾತ್ರ ಆಚರಣೆಯಿಂದ ದೂರ ಉಳಿದಿದ್ದಾರೆ. 2015 ರಲ್ಲಿ ಚೆನ್ನೈ ಪ್ರವಾಹದ ಕಾರಣ ಅವರು ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.

2016 ರಲ್ಲಿ ಆಗಿನ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಧನದ ಕಾರಣದಿಂದ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದರು. ಈ ವರ್ಷ ತಮಿಳುನಾಡು ಮತ್ತು ನೆರೆಯ ರಾಜ್ಯಗಳಲ್ಲಿ ಓಕ್ಹಿ ಸೈಕ್ಲೋನ್ ನಿಂದ ಜನ ತೊಂದರೆಗೀಡಾದ ಕಾರಣ ಅವರು ತಮ್ಮ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದಾರೆ.

22 ವರ್ಷಗಳ ಹಿಂದೆ ಅವರ ಹುಟ್ಟುಹಬ್ಬಕ್ಕೆ ಬಂದಿದ್ದ ಮೂವರು ಅಭಿಮಾನಿಗಳು ವಾಪಸ್ ಹೋಗುವ ಸಂದರ್ಭದಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಅಂದಿನಿಂದ ರಜನಿ ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ಈ ವರ್ಷ ಕೂಡ ಅವರು ಮನೆಯಿಂದ ಹೊರಗೆ ಉಳಿದಿದ್ದಾರೆ.

ಅವರನ್ನು ನೋಡಲು, ಶುಭ ಕೋರಲು ಅಭಿಮಾನಿಗಳು ಪೋಯಸ್ ಗಾರ್ಡನ್ ನಿವಾಸಕ್ಕೆ ಆಗಮಿಸಿದ್ದರಾದರೂ, ರಜನಿ ಇಲ್ಲದ ಕಾರಣ ನಿರಾಸೆಯಿಂದ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...