alex Certify
ಕನ್ನಡ ದುನಿಯಾ       Mobile App
       

Kannada Duniya

ರದ್ದಾಯ್ತು ತಮಿಳು ಚಿತ್ರ ಪ್ರದರ್ಶನ

ಬೆಂಗಳೂರು: ಬೆಂಗಳೂರು ಸಂಪಿಗೆ ಚಿತ್ರಮಂದಿರದಲ್ಲಿ ವಿಜಯ್ ಅಭಿನಯದ ‘ಮೆರ್ಸಲ್’ ತಮಿಳು ಚಿತ್ರ ಪ್ರದರ್ಶನ ರದ್ದುಗೊಳಿಸಲಾಗಿದೆ.

ನಿನ್ನೆ ಸಂಪಿಗೆ ಥಿಯೇಟರ್ ನಲ್ಲಿ ‘ಮೆರ್ಸಲ್’ ಚಿತ್ರ ಬಿಡುಗಡೆಯಾಗಿದ್ದು, ವಿಜಯ್ ಅವರ ಬೃಹತ್ ಕಟೌಟ್ ಹಾಕಲಾಗಿದೆ. ಇದನ್ನು ಅದೇ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರು ತಲೆ ಎತ್ತಿ ನೋಡಿದ್ದಾರೆ. ಇಷ್ಟೇ ವಿಚಾರಕ್ಕೆ ವಿಜಯ್ ಅಭಿಮಾನಿಗಳು ಕಟೌಟ್ ನೋಡಿದ ಕನ್ನಡಿಗ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಕನ್ನಡ ಸಂಘಟನೆಗಳ ಪ್ರಮುಖರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್, ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಮೊದಲಾದವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಕನ್ನಡಿಗ ಯುವಕರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಮಾರ್ನಿಂಗ್ ಶೋ ಮುಗಿದ ಬಳಿಕ ಮಧ್ಯಾಹ್ನದ ಪ್ರದರ್ಶನವನ್ನು ರದ್ದುಗಳಿಸಲಾಗಿದೆ. ರಾಧಾಕೃಷ್ಣ ಚಿತ್ರಮಂದಿರದಲ್ಲಿಯೂ ‘ಮೆರ್ಸಲ್’ ಚಿತ್ರ ಪ್ರದರ್ಶನ ರದ್ದುಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...