alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ದಿನವೇ ಅಮೀರ್ ಚಿತ್ರಕ್ಕೆ ಹಣದ ಮಳೆ

ವಿಜಯ್ ಕೃಷ್ಣ ಆಚಾರ್ಯ ನಿರ್ದೇಶನದ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ವಿಮರ್ಶೆ ಸಿಗ್ತಿದೆ. ಆದ್ರೆ ಬಾಕ್ಸ್ ಆಫೀಸ್ ನಲ್ಲಿ ಮಾತ್ರ ಚಿತ್ರದ ಗಳಿಕೆ ದಾಖಲೆ ಬರೆಯುತ್ತಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ನಾಲ್ಕೈದು ದಾಖಲೆ ಬರೆದಿದೆ.

ವಿಶ್ಲೇಷಕ ತರುಣ್ ಆದರ್ಶ್ ಪ್ರಕಾರ ಮೊದಲ ದಿನ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ 52.25  ಕೋಟಿ ರೂಪಾಯಿ ಗಳಿಸಿದೆ. ಚಿತ್ರ ಹಿಂದಿ ಜೊತೆ ತಮಿಳು, ತೆಲುಗು ಭಾಷೆಯಲ್ಲಿ ತೆರೆಗೆ ಬಂದಿದೆ. ಮೂರೂ ಭಾಷೆಗಳಿಂದ ಚಿತ್ರ 52.25 ಕೋಟಿ ರೂಪಾಯಿ ಗಳಿಕೆ ಕಂಡಿದೆ.

ಥಗ್ಸ್ ಆಫ್ ಹಿಂದೂಸ್ತಾನ್ ಭಾರತದ 5000ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದೆ. ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಇದಾಗಿದೆ. ಹಿಂದಿಯ ಅತ್ಯಂತ ದುಬಾರಿ ಚಿತ್ರವೆಂಬ ಹೆಗ್ಗಳಿಕೆಗೂ ಚಿತ್ರ ಪಾತ್ರವಾಗಿದೆ. ಮೊದಲ ದಿನ ಹೆಚ್ಚು ಗಳಿಕೆ ಕಂಡ ಚಿತ್ರವಾಗಿ ಸಂಜು ದಾಖಲೆ ಬರೆದಿತ್ತು. ಸಂಜು 34.75 ಕೋಟಿ ರೂಪಾಯಿ ಗಳಿಕೆ ಕಂಡಿತ್ತು. ರೇಸ್ ಚಿತ್ರ 29.17 ಕೋಟಿ ರೂಪಾಯಿ ಗಳಿಸಿತ್ತು. ವಾರಾಂತ್ಯದಲ್ಲಿ ಚಿತ್ರ ಇನ್ನಷ್ಟು ಗಳಿಕೆ ಕಾಣುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...