alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಡುಗಡೆಯಾಯ್ತು `ಥಗ್ಸ್ ಆಫ್ ಹಿಂದೂಸ್ತಾನ್’ ಮೊದಲ ಪೋಸ್ಟರ್

ವರ್ಷಾಂತ್ಯದಲ್ಲಿ ಬರ್ತಿರುವ ಬಹು ನಿರೀಕ್ಷಿತ ಚಿತ್ರಗಳಲ್ಲಿ ಥಗ್ಸ್ ಆಫ್ ಹಿಂದೂಸ್ತಾನ್ ಕೂಡ ಒಂದು. ಅಮೀರ್ ಖಾನ್, ಅಮಿತಾಬ್ ಬಚ್ಚನ್, ಕತ್ರಿನಾ ಕೈಫ್ ಅಭಿನಯದ ಈ ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಮಂಗಳವಾರ ಬಿಡುಗಡೆಯಾಗಿದೆ.

ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ ತಂಡ ಪೋಸ್ಟರ್ ಜೊತೆ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ದೀಪಾವಳಿಯಂದು ಚಿತ್ರ ತೆರೆಗೆ ಬರಲಿದೆಯಂತೆ. ಪೋಸ್ಟರ್ ನಲ್ಲಿ ಅಮೀರ್ ಖಾನ್, ಅಮಿತಾಬ್ ಬಚ್ಚನ್, ಕತ್ರಿನಾ ಹಾಗೂ ಫಾತಿಮಾ ಕಾಣಿಸಿಕೊಂಡಿದ್ದಾರೆ.

ಮೊದಲು ನಿರ್ಮಾಪಕರು ಚಿತ್ರದ ಒಂದೊಂದೇ ಪಾತ್ರವನ್ನು ಜನರ ಮುಂದಿಟ್ಟಿದ್ದರು. ಮೊದಲು ಬಿಗ್ ಬಿ, ನಂತ್ರ ಫಾತಿಮಾ, ನಂತ್ರ ಕತ್ರಿನಾ ಹಾಗೂ ಅಮೀರ್ ಲುಕ್ ಬಹಿರಂಗವಾಗಿತ್ತು. ಚಿತ್ರದ ಟ್ರೈಲರ್ ಸೆಪ್ಟೆಂಬರ್ 27 ರಂದು ಬಿಡುಗಡೆಯಾಗಲಿದೆ. ಚಿತ್ರ ನವೆಂಬರ್ 8 ರಂದು ಚಿತ್ರಮಂದಿರಗಳಲ್ಲಿ ರಾರಾಜಿಸಲಿದೆ. ಚಿತ್ರವನ್ನು ವಿಜಯ್ ಕೃಷ್ಣ ಆಚಾರ್ಯ ನಿರ್ದೇಶಿಸಿದ್ದಾರೆ. ಕಾದಂಬರಿ ಆಧಾರಿತ ಚಿತ್ರವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...