alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ಕೊಟ್ಟ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಕೊಟ್ಟಿದ್ದಾರೆ.

ಸಲ್ಮಾನ್ ಖಾನ್, ಕತ್ರಿನಾ ಕೈಫ್ ಅಭಿನಯದ ‘ಟೈಗರ್ ಜಿಂದಾ ಹೈ’ ಚಿತ್ರದ ಪೋಸ್ಟರ್ ಅನ್ನು ದೀಪಾವಳಿ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ‘ಟೈಗರ್ ಜಿಂದಾ ಹೈ’ ಪೋಸ್ಟರ್ ಬಿಡುಗಡೆ ಮಾಡಿರುವ ಸಲ್ಮಾನ್ ‘ದೀಪಾವಳಿ ಗಿಫ್ಟ್ ಚೆನ್ನಾಗಿದೆಯಾ..?’ ಎಂದು ಕೇಳಿದ್ದಾರೆ.

ಪೋಸ್ಟರ್ ನಲ್ಲಿ ಗನ್ ಹಿಡಿದು ಖಡಕ್ ಲುಕ್ ನಲ್ಲಿ ಸಲ್ಮಾನ್ ಕಾಣಿಸಿಕೊಂಡಿದ್ದು, ‘ಗಾಯಗೊಂಡ ಹುಲಿಯನ್ನು ಯಾರೂ ಬೇಟೆಯಾಡಲಾರರು’ ಎಂದು ಬರೆಯಲಾಗಿದೆ.

2012 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ‘ಏಕ್ ಥಾ ಟೈಗರ್’ ಸೀಕ್ವೆಲ್ ಇದಾಗಿದ್ದು, ಚಿತ್ರ ಡಿಸೆಂಬರ್ 22 ರಂದು ತೆರೆ ಕಾಣಲಿದೆ.

ಯಶ್ ರಾಜ್ ಫಿಲಮ್ಸ್ ಬ್ಯಾನರ್ ಅಡಿಯಲ್ಲಿ ಆದಿತ್ಯ ಚೋಪ್ರಾ ನಿರ್ಮಾಣ ಮಾಡಿರುವ ಚಿತ್ರವನ್ನು ಆಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...