alex Certify
ಕನ್ನಡ ದುನಿಯಾ       Mobile App
       

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

uppi

ಬೆಂಗಳೂರು: ಸ್ಯಾಂಡಲ್ ವುಡ್ ಬಹುಬೇಡಿಕೆ ನಟರಲ್ಲೊಬ್ಬರಾದ ಉಪೇಂದ್ರ ಇಂದು ತಮ್ಮ 48 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.

ಕಾವೇರಿ ನದಿ ನೀರಿನ ಹೋರಾಟದ ಹಿನ್ನಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುವುದಾಗಿ ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದರಾದರೂ, ಅಭಿಮಾನಿಗಳ ಸಂಭ್ರಮ ಕಡಿಮೆ ಆಗಿಲ್ಲ. ಕತ್ರಿಗುಪ್ಪೆಯಲ್ಲಿಯಲ್ಲಿರುವ ಉಪೇಂದ್ರ ನಿವಾಸದ ಬಳಿ ರಾತ್ರಿಯಿಂದಲೇ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿದ ಉಪ್ಪಿ, ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡರು.

ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ, ನೆಚ್ಚಿನ ನಟನ ಚಿತ್ರಗಳ ಘೋಷಣೆ ಕೂಗಿದರು. ಭಾರೀ ಅಭಿಮಾನಿಗಳು ನೆರೆದಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಉಪೇಂದ್ರ, ಕಾವೇರಿ ಹೋರಾಟದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಿಸುವಂತೆ ಅಭಿಮಾನಿಗಳಿಗೆ ಹೇಳಿದ್ದೆ. ಆದರೆ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ. ಅವರಿಂದಲೇ ನಾವು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...