alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯದಿಂದ ದೂರವಾಗಿಲ್ಲ ಉಪೇಂದ್ರ

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಲ್ಲಿನ(KPJP) ಬೆಳವಣಿಗೆಗಳಿಂದ ಬೇಸತ್ತು ಹೊರ ಬಂದ ನಟ ಉಪೇಂದ್ರ ‘ಉತ್ತಮ ಪ್ರಜಾಕೀಯ ಪಾರ್ಟಿ’ ಸ್ಥಾಪಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ತಮ್ಮ ಹೊಸ ಪಕ್ಷ ‘ಉತ್ತಮ ಪ್ರಜಾಕೀಯ ಪಾರ್ಟಿ’ಯ ನೋಂದಣಿ ಪ್ರಕ್ರಿಯೆಯಲ್ಲಿ ಅವರು ನಿರತರಾಗಿದ್ದಾರೆ. ಉಪೇಂದ್ರ ಸದ್ಯಕ್ಕೆ ರಾಜಕೀಯದಿಂದ ದೂರವಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ, ಅವರು ರಾಜಕಾರಣದಲ್ಲಿಯೂ ಸಕ್ರಿಯರಾಗಿದ್ದಾರೆ. ಈ ವಿಧಾನಸಭೆ ಚುನಾವಣೆಯಲ್ಲಿ ಅವರ ಪಕ್ಷ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಸಂಘಟನೆ ಮಾಡಿ ಮುಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ.

ಹೊಸ ಚಿಂತನೆಯೊಂದಿಗೆ ಕೆ.ಪಿ.ಜೆ.ಪಿ. ಆರಂಭಿಸಿದ ಉಪೇಂದ್ರ ಅವರಿಗೆ ಭರ್ಜರಿ ಯಶಸ್ಸು ಸಿಕ್ಕರೂ, ಪಕ್ಷದಲ್ಲಿ ಬೆಳವಣಿಗೆಗಳಿಂದ ಅವರು ಹೊರ ನಡೆದು ಹೊಸ ಪಕ್ಷವನ್ನು ಸ್ಥಾಪಿಸುವಲ್ಲಿ ನಿರತರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...