alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ ಚುನಾವಣೆಯಲ್ಲೇ ಸ್ಪರ್ಧೆ: ಉಪೇಂದ್ರ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಳೆಯನ್ನೂ ಲೆಕ್ಕಿಸದೇ ತಡರಾತ್ರಿಯೇ ಕತ್ರಿಗುಪ್ಪೆಯ ಉಪೇಂದ್ರ ನಿವಾಸದ ಬಳಿ ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು.

ಅಭಿಮಾನಿಗಳಿಗೆ ನಿರಾಸೆ ಮಾಡದ ಉಪ್ಪಿ ಎಲ್ಲರನ್ನೂ ಭೇಟಿ ಮಾಡಿದ್ದಾರೆ. ಶುಭಾಶಯ ಸ್ವೀಕರಿಸಿ, ಕೇಕ್ ಕತ್ತರಿಸಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದು, ಉಪೇಂದ್ರ ಪರ ಘೋಷಣೆ ಕೂಗಿದ್ದಾರೆ.

ಈ ಸಂದರ್ಭದಲ್ಲಿ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಬೇಕಾಯಿತು. ಕೆಲವು ಅಭಿಮಾನಿಗಳು ಗಿಡಗಳನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಉಪೇಂದ್ರ, ಇದು ಅಭಿಮಾನಿಗಳ ಹಬ್ಬವಾಗಿದೆ. ಅವರಿಂದಲೇ ನಾವು. ಸಿನಿಮಾ ಕೆಲಸಗಳು ನಡೆಯುತ್ತಿವೆ. ರಾಜಕಾರಣ ಕೂಡ ಮುಂದುವರೆದಿದೆ. ಅಪಾರ ಸಂಖ್ಯೆಯ ಜನ ಜೊತೆಯಾಗಿದ್ದಾರೆ. ದೇವರ ದಯೆ ಇದ್ದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...