alex Certify
ಕನ್ನಡ ದುನಿಯಾ       Mobile App
       

Kannada Duniya

KPJP ಭಿನ್ನಮತ ಸ್ಪೋಟ, ನಾಳೆ ಉಪ್ಪಿ ಹೊಸ ಪಕ್ಷ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆರಂಭದಲ್ಲೇ ಹಿನ್ನಡೆಯಾಗಿದೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ನಾಯಕರಾದ ಉಪೇಂದ್ರ ಹಾಗೂ ಮಹೇಶ್ ಗೌಡ ಅವರ ನಡುವೆ ಆರಂಭದಿಂದಲೂ ತಿಕ್ಕಾಟ ನಡೆದಿದ್ದು, ಪಕ್ಷದಿಂದ ದೂರವಾಗಲು ಉಪೇಂದ್ರ ಚಿಂತನೆ ನಡೆಸಿದ್ದಾರೆ.

ಹೊಸ ಪಕ್ಷ ಕಟ್ಟುವ ಉದ್ದೇಶದಿಂದ ಈಗಾಗಲೇ ಉಪೇಂದ್ರ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ತಮ್ಮದೇ ‘ಪ್ರಜಾಕೀಯ’ ಪಕ್ಷ ಸ್ಥಾಪನೆ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಕೆ.ಪಿ.ಜೆ.ಪಿ. ಮೂಲಕ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ ಪಡೆದು 6 ತಿಂಗಳಾಗಿಲ್ಲ. ಇಷ್ಟರಲ್ಲಾಗಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಮಹೇಶ್ ಗೌಡ ಮತ್ತು ಉಪೇಂದ್ರ ಅವರ ನಡುವೆ ಪಕ್ಷದ ಸಂಘಟನೆ, ದೇಣಿಗೆ ಸಂಗ್ರಹ, ಪಕ್ಷದ ಟಿಕೆಟ್ ಹಂಚಿಕೆ, ಅಭ್ಯರ್ಥಿಗಳ ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದೆ.

ಉಪೇಂದ್ರ ನಾಳೆ ಈಗಾಗಲೇ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಮತ್ತು ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದು, ತಮ್ಮ ನಿಲುವು ಸ್ಪಷ್ಟಪಡಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...