alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಡುಗಡೆಯಾಯ್ತು ಉಪೇಂದ್ರ ಪಕ್ಷದ ಪ್ರಣಾಳಿಕೆ

ರಿಯಲ್ ಸ್ಟಾರ್ ಉಪೇಂದ್ರ ಅವರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಭಾವ್ಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಪಾರದರ್ಶಕ, ಸರಳ, ಹೊಣೆಗಾರಿಕೆ ಇರುವ ಆಡಳಿತದ ಭರವಸೆ ನೀಡಲಾಗಿದೆ.

ಜನರಿಂದ ಸಮಸ್ಯೆಗಳನ್ನು ನೇರವಾಗಿ ತಿಳಿಯುವ, ಸ್ಪಂದಿಸುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಲಾಗಿದೆ. ಪ್ರತಿ ಇಲಾಖೆಗಳಿಗೆ ಸಾಮಾಜಿಕ ಜಾಲತಾಣಗಳು, ಸರ್ಕಾರದ ಟೆಲಿವಿಷನ್ ಆರಂಭಿಸಲಾಗುವುದು.

ಮೊಬೈಲ್ ಅಪ್ಲಿಕೇಷನ್ ಮೂಲಕ ಜನರೇ ನೇರವಾಗಿ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಕುರಿತಾಗಿ ಮಾಹಿತಿ ಹಂಚಿಕೊಳ್ಳಲು, ಅದಕ್ಕೆ ಕೂಡಲೇ ಸಂಬಂಧಿಸಿದವರು ಸ್ಪಂದಿಸಲು ಯೋಜನೆ ರೂಪಿಸಲಾಗಿದೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಪುರಸ್ಕರಿಸುವ, ಸ್ಪಂದಿಸದವರನ್ನು ತಿರಸ್ಕರಿಸುವ ಆಯ್ಕೆ ಇದೆ.

ಅಂಕ ಗಳಿಕೆಯ ಆಧಾರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಅಧಿಕಾರಿಗಳಿಗೆ ಬಡ್ತಿ ನೀಡಲಾಗುತ್ತದೆ. ತಪ್ಪು ಮಾಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಜೊತೆಗೆ ವೇತನವನ್ನು ಕಡಿತ ಮಾಡಲಾಗುತ್ತದೆ. ಇಂತಹ ಹಲವಾರು ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...