alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಪಕ್ಷ ಘೋಷಿಸಿದ ಉಪೇಂದ್ರಗೆ ಆರಂಭದಲ್ಲೇ ವಿಘ್ನ

ರಿಯಲ್ ಸ್ಟಾರ್ ಉಪೇಂದ್ರ ಹೊಸ ಆಶಯಗಳೊಂದಿಗೆ ರಾಜಕಾರಣ ಆರಂಭಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆಯಲ್ಲಿದ್ದಾರೆ.

ಕರ್ನಾಟಕ ಪ್ರಜ್ಞಾವಂತರ ಜನತಾಪಕ್ಷದ ಮೂಲಕ ಉಪೇಂದ್ರ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದು, ಅವರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಉಪೇಂದ್ರ, ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ ಎಂದು ಬಿ.ಜೆ.ಪಿ. ಸಂಸದೆ ಶೋಭಾ ಕರಂದ್ಲಾಜೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ನಾಯಕರು ಉಪೇಂದ್ರ ರಾಜಕಾರಣ ಕುರಿತಾಗಿ ಮಾತನಾಡಿದ್ದರು.

ಜೆ.ಡಿ.ಯು. ಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು, ಉಪೇಂದ್ರ ವಿರುದ್ಧ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ. ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದ ಉದ್ಘಾಟನಾ ಸಮಾರಂಭದಲ್ಲಿ ಉಪೇಂದ್ರ, ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಹಣ ಕೊಟ್ಟರೆ ತೆಗೆದುಕೊಳ್ಳಿ ಎಂದು ಹೇಳುವ ಮೂಲಕ ಜನರನ್ನು ಪ್ರಚೋದಿಸಿದ್ದಾರೆ ಎಂಬುದು ನಾಗೇಶ್ ಆರೋಪವಾಗಿದೆ.

ಅವರು ಉಪೇಂದ್ರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಚುನಾವಣಾ ಆಯೋಗಕ್ಕೂ ದೂರು ನೀಡಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...