alex Certify
ಕನ್ನಡ ದುನಿಯಾ       Mobile App
       

Kannada Duniya

ದುನಿಯಾ ವಿಜಯ್ ಗೆ ಇಂದು ಸಿಗುತ್ತಾ ಬೇಲ್…?

ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹ ಪಾಲಾಗಿರುವ ನಟ ದುನಿಯಾ ವಿಜಯ್ ಅವರಿಗೆ ಇಂದು ಜಾಮೀನು ಸಿಗಲಿದೆಯಾ ಎಂಬ ಕುತೂಹಲ ಮೂಡಿದೆ.

ಮಾರುತಿ ಗೌಡರ ಮೇಲಿನ ಹಲ್ಲೆ ಹಾಗೂ ಅಪಹರಣ ಪ್ರಕರಣದಲ್ಲಿ ದುನಿಯಾ ವಿಜಯ್ ಮತ್ತವರ ಸಹಚರರನ್ನು ಬಂಧಿಸಿದ್ದ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು.

ಆ ಬಳಿಕ ದುನಿಯಾ ವಿಜಯ್ ಮತ್ತವರ ಸಹಚರರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ನಂತರ ಜಾಮೀನು ಕೋರಿ ದುನಿಯಾ ವಿಜಯ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದರ ತೀರ್ಪು ಇಂದು ಹೊರ ಬೀಳಲಿದೆ. ದುನಿಯಾ ವಿಜಯ್ ಮತ್ತವರ ಸಹಚರರಿಗೆ ಜಾಮೀನು ಸಿಗಲಿದೆಯಾ ಎಂಬುದು ಈಗ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...