alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ವಿಕ್ರಮ್ ಪುತ್ರಿಯ ಅದ್ದೂರಿ ನಿಶ್ಚಿತಾರ್ಥ

VIKRAM 334ತಮಿಳಿನ ಖ್ಯಾತ ನಟ ವಿಕ್ರಮ್ ಅವರ ಪುತ್ರಿ ಅಕ್ಷಿತಾರ ವಿವಾಹ ನಿಶ್ಚಿತಾರ್ಥ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಮರಿ ಮೊಮ್ಮಗ ಮನು ರಂಜಿತ್ ಜೊತೆ ಅದ್ದೂರಿಯಾಗಿ ನೆರವೇರಿದೆ.

ಕುಟುಂಬ ಸದಸ್ಯರು ಹಾಗೂ ಆಪ್ತ ಸ್ನೇಹಿತರು ಈ ಸಂದರ್ಭದಲ್ಲಿ ಹಾಜರಿದ್ದರೆಂದು ಹೇಳಲಾಗಿದ್ದು, ವಿವಾಹ ಸಮಾರಂಭ ಮುಂದಿನ ವರ್ಷ ನಡೆಯಲಿದೆ ಎಂದು ಹೇಳಲಾಗಿದೆ. ಉದ್ಯಮಿಯೂ ಆಗಿರುವ ಮನು ರಂಜಿತ್ ಹಾಗೂ ಅಕ್ಷಿತಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಹಿರಿಯರ ಒಪ್ಪಿಗೆ ಪಡೆದು ವೈವಾಹಿಕ ಬದುಕಿಗೆ ಕಾಲಿಡಲು ಮುಂದಾಗಿದ್ದಾರೆ.

ಚೆನ್ನೈನಲ್ಲಿ ವಿವಾಹ ಸಮಾರಂಭ ನಡೆಯಲಿದೆ ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಚಿತ್ರೋದ್ಯಮ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರಿಗೆ ಆಹ್ವಾನ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಮಗಳ ನಿಶ್ಚಿತಾರ್ಥ ಸಮಾರಂಭದ ಸಿದ್ದತೆಗಾಗಿ ತಮ್ಮ ಚಿತ್ರದ ಚಿತ್ರೀಕರಣವನ್ನು ವಿಕ್ರಮ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೆಂದು ಹೇಳಲಾಗಿದ್ದು, ಇದೀಗ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...