alex Certify
ಕನ್ನಡ ದುನಿಯಾ       Mobile App
       

Kannada Duniya

ಅನುಷ್ಕಾ ಬರ್ತಡೇಗೆ ಗಿಫ್ಟ್ ಕೊಡಲು ಕೊಹ್ಲಿ ರೆಡಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಪತ್ನಿಗೆ ಗೆಲುವಿನ ಉಡುಗೊರೆ ಕೊಡ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಬಿಡುವು ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದಾರೆ. ಮೇ 1 ರಂದು ಅನುಷ್ಕಾ ಬರ್ತಡೇ ಇದ್ದು, ಪತ್ನಿಯ ಹುಟ್ಟುಹಬ್ಬಕ್ಕೆ ಗೆಲುವಿನ ಉಡುಗೊರೆ ನೀಡಲು ಕೊಹ್ಲಿ ಸಜ್ಜಾಗಿದ್ದಾರೆ. ಅವರು ಪ್ರೇಮ ಪರೀಕ್ಷೆಯಲ್ಲಿ ಪಾಸಾಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಅಂದ ಹಾಗೇ, ಶಾರುಕ್ ಖಾನ್ ಬಾಯ್ಸ್(ಕೋಲ್ಕತ್ತಾ ನೈಟ್ ರೈಡರ್ಸ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ತಂಡಗಳು ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಆರ್.ಸಿ.ಬಿ ಗೆ. ಇಂದಿನ ಪಂದ್ಯ ಮಹತ್ವದ್ದಾಗಿದೆ. ಈ ಸೀಸನ್ ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ತಂಡದ ಎದುರು ಸೋಲು ಕಂಡಿದ್ದ ಆರ್.ಸಿ.ಬಿ. ಇಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದು, ಇದಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಲಾಗ್ತಿದೆ.

ಇಂದಿನ ಪಂದ್ಯದಲ್ಲಿ ಆರ್. ಸಿ. ಬಿ. ಸೋತಲ್ಲಿ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯುವುದು ಕಷ್ಟ ಸಾಧ್ಯ. ಹಾಗಾಗಿ ಕೋಲ್ಕತ್ತಾ ತಂಡದ ವಿರುದ್ಧ ಜಯಿಸಲೇ ಬೇಕಿದೆ. ಇದಕ್ಕಾಗಿ ಕೊಹ್ಲಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...