alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲದ ಹೇಳಿಕೆ ನೀಡಿದ ರಜನಿಕಾಂತ್

kala-aa

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ‘ಕಾಲ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈನಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡ ಮುಂದಿನ ಹಂತದ ಶೂಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕೆಲವು ದಿನಗಳ ಹಿಂದಷ್ಟೇ ರಜನಿಕಾಂತ್ ರಾಜಕೀಯಕ್ಕೆ ಬರುವ ಕುರಿತಾಗಿ ವ್ಯಾಪಕ ಚರ್ಚೆ ನಡೆದಿತ್ತು. ರಜನಿ ರಾಜಕೀಯ ಪ್ರವೇಶದ ಕುರಿತಾಗಿ ಪರ, ವಿರೋಧ ಚರ್ಚೆ ಕೂಡ ನಡೆದಿತ್ತು.

ಹಲವು ವರ್ಷಗಳ ಬಳಿಕ ರಜನಿಕಾಂತ್ ಅಭಿಮಾನಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದು, ಅವರ ರಾಜಕೀಯ ಪ್ರವೇಶದ ಪೂರ್ವಭಾವಿ ಸಿದ್ಧತೆ ಎಂದೆಲ್ಲಾ ಹೇಳಲಾಗಿತ್ತು.

ಇನ್ನೇನು ರಜನಿ ರಾಜಕೀಯ ಪ್ರವೇಶಿಸಲಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುತ್ತಾರೆ ಎನ್ನುವಾಗಲೇ ‘ಕಾಲ’ ಚಿತ್ರದ ಚಿತ್ರೀಕರಣ  ಆರಂಭವಾಯ್ತು.

ಮುಂಬೈನಲ್ಲಿ ಮೊದಲ ಹಂತದ ಚಿತ್ರೀಕರಣ ಕೂಡ ನಡೆದಿದೆ. ಈಗ ಮತ್ತೆ ಅಭಿಮಾನಿಗಳನ್ನು ಭೇಟಿ ಮಾಡುವುದಾಗಿ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ 2 ನೇ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಅಲ್ಲದೇ ನಾನು ಮತ್ತೆ ಅಭಿಮಾನಿಗಳನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ರಜನಿಕಾಂತ್ ನೀಡಿರುವ ಈ ಹೇಳಿಕೆ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...