alex Certify
ಕನ್ನಡ ದುನಿಯಾ       Mobile App
       

Kannada Duniya

ಫೋರ್ಬ್ಸ್ ಪಟ್ಟಿಯಲ್ಲಿ ಸಲ್ಮಾನ್ ಗಿಲ್ಲ ಸ್ಥಾನ..!

srk-akshay-forbesಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಸುಲ್ತಾನ್’ ಚಿತ್ರ ಬಿಡುಗಡೆಗೊಂಡ ಮೂರು ದಿನಗಳಲ್ಲೇ ‘100 ಕೋಟಿ ಕ್ಲಬ್’ ಸೇರುವ ಮೂಲಕ ದಾಖಲೆ ಮಾಡಿದೆ. ಅಲ್ಲದೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಪ್ರಥಮ ಸ್ಥಾನದಲ್ಲಿದ್ದಾರೆ. ಆದರೆ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಸೆಲೆಬ್ರಿಟಿಗಳ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಸಲ್ಮಾನ್ ಸ್ಥಾನ ಗಿಟ್ಟಿಸಿಕೊಂಡಿಲ್ಲ.

ಫೋರ್ಬ್ಸ್ ನಿಯತಕಾಲಿಕೆ 2016 ರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ವಿಶ್ವದ 100 ಸೆಲೆಬ್ರಿಟಿಗಳ ಪಟ್ಟಿ ಪ್ರಕಟಿಸಿದ್ದು, ಅದರಲ್ಲಿ ಬಾಲಿವುಡ್ ನಟರಾದ ಶಾರೂಕ್ ಖಾನ್ ಹಾಗೂ ಅಕ್ಷಯ್ ಕುಮಾರ್ ಸ್ಥಾನ ಪಡೆದಿದ್ದಾರೆ. 221 ಕೋಟಿ ರೂಪಾಯಿ ಆದಾಯದೊಂದಿಗೆ ಶಾರೂಕ್ ಖಾನ್ 86 ನೇ ಸ್ಥಾನದಲ್ಲಿದ್ದರೆ, 211 ಕೋಟಿ ರೂ. ಆದಾಯದೊಂದಿಗೆ ಅಕ್ಷಯ್ ಕುಮಾರ್ 94 ನೇ ಸ್ಥಾನದಲ್ಲಿದ್ದಾರೆ.

ಅಮೆರಿಕಾದ ಗಾಯಕ ಟೇಲರ್ ಸ್ವಿಫ್ಟ್ 1141 ಕೋಟಿ ರೂ. ಆದಾಯ ಗಳಿಸುವ ಮೂಲಕ ಫೋರ್ಬ್ಸ್ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ. ರಿಯಾಲ್ ಮ್ಯಾಡ್ರಿಡ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ 4 ನೇ ಸ್ಥಾನದಲ್ಲಿದ್ದು, ಬ್ಯಾಸ್ಕೆಟ್ ಬಾಲ್ ಆಟಗಾರ ಲೆಬ್ರಾನ್ ಜೇಮ್ಸ್ 11 ನೇ ಸ್ಥಾನದಲ್ಲಿದ್ದಾರೆ. ಮಡೋನಾ 12 ನೇ ಸ್ಥಾನ ಪಡೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...