alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಡೋಮ್’ ಹೇಳಿಕೆ ನೀಡಿದ್ದ ನಿರ್ದೇಶಕ ಅರೆಸ್ಟ್

ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ನಿಜಕ್ಕೂ ಈ ಕ್ರೂರ ಘಟನೆ ಎಂತವರಿಗೂ ಸಿಟ್ಟು ಬರುವಂತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಬೆಂಕಿ ಹತ್ತಿ ಉರಿಯುತ್ತಿದೆ. ಈ ಹೊತ್ತಲೇ ನಿರ್ದೇಶಕನೊಬ್ಬ ಹಾಕಿದ್ದ ಪೋಸ್ಟ್ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು, ನಿರ್ದೇಶಕ ಡೇನಿಯಲ್ ಶ್ರವಣ್ ತನ್ನ ಫೇಸ್‍ಬುಕ್‍ನಲ್ಲಿ ಬಾಯಿಗೆ ಬಂದಂತೆ ಪೋಸ್ಟ್ ಹಾಕಿಕೊಂಡಿದ್ದಾನೆ. ಪಶುವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಡೇನಿಯಲ್ ತನ್ನ ಫೇಸ್‍ಬುಕ್‍ನಲ್ಲಿ
ಪೋಸ್ಟ್ ಮಾಡಿದ್ದು, ಈ ಪೋಸ್ಟ್ ನಲ್ಲಿ ಮಹಿಳೆಯರಿಗೆ ಅವಮಾನ ಮಾಡಿದ್ದಾನೆ.

ಅತ್ಯಾಚಾರಿಗಳು ಹೇಳಿದಂತೆ ಮಹಿಳೆಯರು ಕೇಳಬೇಕಂತೆ. ಮಹಿಳೆಯರು ತಮ್ಮ ಬ್ಯಾಗ್ ನಲ್ಲಿ ಕಾಂಡೋಮ್ ಗಳನ್ನು ಇಟ್ಟುಕೊಳ್ಳಬೇಕಂತೆ. ಅಷ್ಟೆ ಅಲ್ಲ ಹಿಂಸಾಚಾರವಿಲ್ಲದೆ ಅತ್ಯಾಚಾರಗಳನ್ನು ಕಾನೂನುಬದ್ಧಗೊಳಿಸಿದರೆ ಹತ್ಯೆಗಳು ನಡೆಯುವುದಿಲ್ಲ ಎಂದು ಹುಚ್ಚುಚ್ಚಾಗಿ ಬರೆದುಕೊಂಡಿದ್ದಾನೆ. ಈ ಪೋಸ್ಟ್ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆದರೆ ಈತ ಈ ಪೋಸ್ಟ್ ಹಾಕಿದ್ದು ಸಿನಿಮಾಗಾಗಿ ಎಂದು ಹೇಳಿದ್ದಾನೆ.

— Kubbra Sait (@KubbraSait) December 4, 2019

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...