alex Certify
ಕನ್ನಡ ದುನಿಯಾ       Mobile App
       

Kannada Duniya

ಯಶ್–ರಾಧಿಕಾ ಪಂಡಿತ್ ನೋಡಲು ಮುಗಿಬಿದ್ದ ಅಭಿಮಾನಿಗಳು

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ಶಾಸಕ ಮಾನಪ್ಪ ವಜ್ಜಲ್ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ನಟ ಯಶ್ ಹಾಗೂ ರಾಧಿಕಾ ಪಂಡಿತ್ ಭಾಗವಹಿಸಿ ವಧು –ವರರಿಗೆ ಶುಭಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕರು ಆಹ್ವಾನ ನೀಡಿದ್ದ ಹಿನ್ನಲೆಯಲ್ಲಿ ಯಶ್ ದಂಪತಿ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು, ಅವರನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಇದರಿಂದಾಗಿ ಜನರನ್ನು ನಿಯಂತ್ರಿಸಲು ಪೊಲೀಸರು, ಕಾರ್ಯಕ್ರಮ ಆಯೋಜಕರು ಹರಸಾಹಸ ನಡೆಸುವಂತಾಗಿದೆ. ಕೆಲ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಂಪತಿ ಬಳಿಕ ಅಲ್ಲಿಂದ ಪ್ರಯಾಣ ಬೆಳೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...