alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ರೈತಪರ ಕಾಳಜಿ ತೋರಿದ ರಾಕಿಂಗ್ ಸ್ಟಾರ್ ಯಶ್

act-yash-yash-rock

ಈಗಾಗಲೇ ‘ಯಶೋ ಮಾರ್ಗ’ ಸಂಸ್ಥೆಯ ಮೂಲಕ, ಸಮಾಜಮುಖಿ ಕಾರ್ಯ ಕೈಗೊಂಡಿರುವ ರಾಕಿಂಗ್ ಸ್ಟಾರ್ ಯಶ್, ಕುಡಿಯುವ ನೀರಿನ ಪೂರೈಕೆ, ಕೆರೆ ಹೂಳೆತ್ತುವ ಕಾರ್ಯ ಕೈಗೊಂಡಿದ್ದಾರೆ.

ಈಗ ರೈತ ಪರ ಕಾಳಜಿಯ ಕೆಲಸಕ್ಕೆ ಕೈ ಹಾಕಿದ್ದು, ಮತ್ತೊಂದು ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ. ಮೇವಿನ ಕೊರತೆ ಎದುರಿಸುತ್ತಿರುವ ಗೋವುಗಳ ರಕ್ಷಣೆಗೆ ಕಾಳಜಿ ತೋರಿದ್ದಾರೆ.

ಚಾಮರಾಜನಗರ ಕೊಳ್ಳೆಗಾಲ ಭಾಗದಲ್ಲಿ ಮೇವಿನ ಕೊರತೆಯಿಂದ ಜಾನುವಾರುಗಳು ಸಂಕಷ್ಟದಲ್ಲಿರುವುದನ್ನು ಮಾಧ್ಯಮಗಳಲ್ಲಿ ತಿಳಿದುಕೊಂಡ ಯಶ್, ತಮ್ಮ ಸಂಸ್ಥೆಯ ಮೂಲಕ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಗೋಶಾಲೆಗಳನ್ನು ತೆರೆಯಲಾಗಿದ್ದು, ಧ್ಯಾನ್ ಫೌಂಡೇಷನ್ ಮತ್ತು ಶ್ರೀರಾಮಚಂದ್ರಾಪುರ ಮಠದ ವತಿಯಿಂದ ಮೇವು ಪೂರೈಕೆ ಮಾಡಲಾಗುತ್ತಿದೆ. ಇವರಿಗೆಲ್ಲ ಅಭಿನಂದೆನಗಳು ಎಂದು ಯಶ್ ಹೇಳಿದ್ದಾರೆ.

ಇನ್ನೂ ಹೆಚ್ಚಿನ ಮೇವು ಪೂರೈಕೆ ಸಂಬಂಧ ಸಂಸದರಾದ ಧ್ರುವನಾರಾಯಣ್ ಮತ್ತು ಸಚಿವರಾದ ಎ. ಮಂಜು ಅವರೊಂದಿಗೆ ಮಾತನಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಯಶ್ ತಿಳಿಸಿದ್ದಾರೆ.

ಭಾದಿತವಾಗಿರುವ ಗ್ರಾಮಗಳಿಗೆ ಶೀಘ್ರವಾಗಿ ಹೆಚ್ಚಿನ ನೆರವು ತಲುಪುವುದನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಫೇಸ್ ಬುಕ್ ನಲ್ಲಿ ಯಶ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...