alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ಸೇರದಿದ್ದರೂ ಪ್ರಚಾರಕ್ಕೆ ಯಶ್, ನೋಡಲು ಮುಗಿಬಿದ್ದ ಫ್ಯಾನ್ಸ್

ರಾಜಕೀಯಕ್ಕೆ ಸೇರದಿದ್ದರೂ ನಟ ರಾಕಿಂಗ್ ಸ್ಟಾರ್ ಯಶ್ ಮೈಸೂರಿನಲ್ಲಿ ಇಂದು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕೆ.ಆರ್. ನಗರದ ಜೆ.ಡಿ.ಎಸ್. ಅಭ್ಯರ್ಥಿ ಸಾ.ರಾ. ಮಹೇಶ್ ಅವರ ಪರವಾಗಿ ಯಶ್ ರೋಡ್ ಶೋ ನಡೆಸಿದ್ದಾರೆ.

ಕೆ.ಆರ್. ನಗರದ ತೋಪಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಯಶ್ ಹಾಗೂ ಸಾ.ರಾ. ಮಹೇಶ್ ಕ್ಷೇತ್ರದ ವಿವಿಧೆಡೆ ರೋಡ್ ಶೋ ನಡೆಸಿದ್ದಾರೆ. ಯಶ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಜನರನ್ನು ನಿಯಂತ್ರಿಸಲು ಹರಸಾಹಸ ನಡೆಸುವಂತಾಗಿದೆ.

ಈ ಸಂದರ್ಭದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡ ಯಶ್, ನಾನು ಸ್ನೇಹಿತರು ಇರುವ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದೇನೆ. ಸಾ.ರಾ. ಮಹೇಶ್ ಅವರ ಪರವಾಗಿ ಪ್ರಚಾರ ನಡೆಸಿದ್ದೇನೆ. ಯುವಕರು ಜನಪರ ಕಾಳಜಿ ಹೊಂದಿರುವ ಹಾಗೂ ಕೆಲಸ ಮಾಡುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಹೇಳಿದ್ದಾರೆ.

ಯಾವುದೇ ರಾಜಕೀಯ ಪಕ್ಷ, ಸಿದ್ಧಾಂತಗಳಿಗೆ ನಾನು ಬೆಂಬಲಿಸಿಲ್ಲ. ಸ್ನೇಹಿತರ ಪರ ಪ್ರಚಾರ ನಡೆಸಿದ್ದೇನೆ. ನಾನು ರಾಜಕೀಯಕ್ಕೆ ಬರಬೇಕೆಂದುಕೊಂಡಿಲ್ಲ. ಸದ್ಯಕ್ಕೆ ನನ್ನ ಕೆಲಸಗಳಲ್ಲಿ ಬ್ಯುಸಿಯಾಗಿದ್ದೇನೆ. ನನ್ನ ಕನಸುಗಳಿಗೆ ಪೂರಕವಾಗಿದ್ದವರಿಗೆ ಬೆಂಬಲ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ತೆರೆದ ವಾಹನದಲ್ಲಿ ಯಶ್ ರೋಡ್ ಶೋ ನಡೆಸಿದ್ದು, ಅವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...