alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭ ಕೋರಿದ್ದಾರೆ. ರಾತ್ರಿಯಿಂದಲೇ ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಕತ್ರಿಗುಪ್ಪೆ ನಿವಾಸದ ಬಳಿ ನಿನ್ನೆ ಸಂಜೆಯಿಂದಲೇ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಯಶ್ ಅವರನ್ನು ಕಾಣುತ್ತಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಅವರೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ ಫ್ಯಾನ್ಸ್ ತಾವು ತಂದಿದ್ದ ಕೇಕ್ ಅನ್ನು ಯಶ್ ಅವರಿಂದ ಕಟ್ ಮಾಡಿಸಿ ಖುಷಿ ಪಟ್ಟಿದ್ದಾರೆ. ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ವಿವಿಧ ಕಡೆಗಳಿಂದ ಯಶ್ ಅಭಿಮಾನಿಗಳು ಆಗಮಿಸಿದ್ದು, ಎಲ್ಲರಿಂದಲೂ ಶುಭಾಶಯ ಸ್ವೀಕರಿಸಿದ ಯಶ್ ಅಭಿಮಾನಿಗಳ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬಿಡುಗಡೆಯಾಗಿರುವ ‘ಕೆ.ಜಿ.ಎಫ್.’ ಟೀಸರ್ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚು ಮಾಡಿದೆ. ಯಶ್ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ ಟೀಸರ್ ಹಲ್ ಚಲ್ ಎಬ್ಬಿಸಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...