alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಗೆ ಫಿದಾ ಆದ್ರು ಈ ವಿದೇಶಿ ಅಭಿಮಾನಿ

ರಾಕಿಂಗ್ ಸ್ಟಾರ್ ಯಶ್ ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಅಭಿಮಾನ. ಸಿನಿಮಾ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳ ಮೂಲಕವೂ ಯಶ್ ಗಮನಾರ್ಹ ಕೆಲಸವನ್ನು ಮಾಡಿದ್ದಾರೆ.

ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ, ವಿದೇಶದಲ್ಲಿಯೂ ಅಭಿಮಾನಿಗಳಿದ್ದಾರೆ. ಅಮೆರಿಕದ ಲಿಯಾ ಎಂ. ಸೆಂಟ್ರಾಕಿಯಾ ಅವರಿಗೆ ಯಶ್ ಅಂದ್ರೆ ಬಲು ಇಷ್ಟ. ತಮ್ಮ ಅಭಿಮಾನವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸಿನಿಮಾಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಲಿಯಾ, ಕನ್ನಡ ಮತ್ತು ಹಿಂದಿ ಭಾಷೆಯನ್ನು ಕಲಿಯುತಿದ್ದಾರಂತೆ. ಯಶ್ ಅವರ ‘ಗೂಗ್ಲಿ’ ಹಿಂದಿಗೆ ಡಬ್ ಆಗಿದ್ದು, ಇದನ್ನು ವೀಕ್ಷಿಸಿದ ಅವರು ಯಶ್ ಅವರ ಮುಂದಿನ ಚಿತ್ರ ‘ಕೆ.ಜಿ.ಎಫ್.’ಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.

‘ಗೂಗ್ಲಿ’ ನೋಡಿದ ನಂತರ ಕನ್ನಡವನ್ನು ಕಲಿಯುತ್ತಿನೆ ಎಂದು ಅವರು ಕನ್ನಡದಲ್ಲಿ ಯಶ್ ಕುರಿತಾಗಿ ಅಭಿಮಾನ ವ್ಯಕ್ತಪಡಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...