alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಫ್ಯಾನ್ಸ್ ಗೆ ಸಂಭ್ರಮದ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆ.ಜಿ.ಎಫ್.’ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿಸುದ್ದಿ ಇಲ್ಲಿದೆ.

ಕಳೆದ ವರ್ಷದಿಂದ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಆರಂಭದಿಂದಲೂ ಸಿನಿರಸಿಕರಲ್ಲಿ ಚಿತ್ರ ಕುತೂಹಲ ಮೂಡಿಸಿದೆ. ಅಂದ ಹಾಗೇ ‘ಕೆ.ಜಿ.ಎಫ್.’ ಚಿತ್ರೀಕರಣ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಯಶ್ ಇಂಟ್ರಡಕ್ಷನ್ ಸಾಂಗ್ ಶೂಟಿಂಗ್ ಗೆ ಸಿದ್ಧತೆಗಳು ನಡೆದಿವೆ.

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ವಿಶೇಷ ಸೆಟ್ ನಿರ್ಮಿಸಲಾಗಿದ್ದು, ಈ ವಿಶೇಷವಾದ ಸೆಟ್ ನಲ್ಲಿ ಚಿತ್ರೀಕರಣ ನಡೆಸಲಾಗುವುದು. 80 ರ ದಶಕದ ಕಥಾ ಹಂದರವಿರುವ ‘ಕೆ.ಜಿ.ಎಫ್.’ನಲ್ಲಿ ಯಶ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಅದ್ಧೂರಿ ವೆಚ್ಚದಲ್ಲಿ ಹೈ ಬಜೆಟ್ ನಲ್ಲಿ ಚಿತ್ರ ನಿರ್ಮಾಣವಾಗ್ತಿದೆ. ಸಾಂಗ್ ಶೂಟಿಂಗ್ ಪೂರ್ಣಗೊಳಿಸಿ, ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಆರಂಭಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...