alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಯ್ತು ಯಶ್ ‘KGF’ ಸೆಕೆಂಡ್ ಪೋಸ್ಟರ್

ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಣ ಹಂತದಲ್ಲಿಯೇ ಭಾರೀ ಸಂಚಲನ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆ.ಜಿ.ಎಫ್.’ ಚಿತ್ರದ 2 ನೇ ಪೋಸ್ಟರ್ ರಿವೀಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದೆ.

ಒಂದೇ ಒಂದು ಪೋಸ್ಟರ್ ನಿಂದಲೇ ಕ್ರೇಜ್ ಹುಟ್ಟಿಸಿದ್ದ ‘ಕೆ.ಜಿ.ಎಫ್.’ ಚಿತ್ರದ 2 ನೇ ಪೋಸ್ಟರ್ ರಿಲೀಸ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ ಬೈಕ್ ಬಳಿ ರಗಡ್ ಲುಕ್ ನಲ್ಲಿ ನಿಂತಿರುವ ದೃಶ್ಯ ಅಭಿಮಾನಿಗಳನ್ನು ಹುಚ್ಚೆಬ್ಬಿಸುವಂತಿದೆ.

ಹೊಂಬಾಳೆ ಫಿಲಮ್ಸ್ ನ ವಿಜಯ್ ಕಿರಂಗದೂರು ಹೈ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.

ಈಗಾಗಲೇ ಕೆ.ಜಿ.ಎಫ್. ಬಳಿ ನಿರ್ಮಿಸಿರುವ ವಿಶೇಷವಾದ ಸೆಟ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. 2 ನೇ ಹಂತದ ಚಿತ್ರೀಕರಣ ಭರದಿಂದ ಸಾಗಿದ್ದು, ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ.

ಫಸ್ಟ್ ಲುಕ್ ನಲ್ಲಿ ರಾಕಿಂಗ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದ ಯಶ್ 2 ನೇ ಪೋಸ್ಟರ್ ನಲ್ಲಿ ರಗಡ್ ಲುಕ್ ನಲ್ಲಿ ಮಿಂಚಿದ್ದಾರೆ. ಯಶ್, ಶ್ರೀನಿಧಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...