alex Certify
ಕನ್ನಡ ದುನಿಯಾ       Mobile App
       

Kannada Duniya

ರಶ್ಮಿಕಾಗೆ ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ..?

yash-df-face

ರಾಕಿಂಗ್ ಸ್ಟಾರ್ ಯಶ್ ಕುರಿತಾಗಿ ‘ಕಿರಿಕ್ ಪಾರ್ಟಿ’ ನಟಿ ರಶ್ಮಿಕಾ ಮಂದಣ್ಣ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿ ಅಭಿಮಾನಿಗಳನ್ನು ಕೆರಳಿಸಿತ್ತು.

ಯಶ್ ಶೋ ಆಫ್ ಎಂದು ರಶ್ಮಿಕಾ ಹೇಳಿದ್ದಕ್ಕೆ ಯಶ್ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಯಶ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅವರ ಮಾತಿನಲ್ಲೇ ಹೇಳುವುದಾದರೆ,

ಎಲ್ಲರಿಗೂ ನಮಸ್ಕಾರ,

ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿರ್ಲಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ, ನನ್ನನ್ನು ಪ್ರೀತಿಸುವ ನಿಮ್ಮ ಮನಸ್ಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೇ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆ ಕಟ್ಟಲು ಆಗುವುದಿಲ್ಲ. ಅದಕ್ಕೆ ನಾನೆಂದೂ ಚಿರಋಣಿ.

ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ. ಇದುವರೆಗೂ ಭೇಟಿಯೂ ಮಾಡಿಲ್ಲ. ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಅಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು. ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.

‘ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ’.

ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ. ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ.

ಕೆಲವೇ ದಿನಗಳಲ್ಲಿ ‘ಕೆ.ಜಿ.ಎಫ್.’ ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್.

ಹೀಗೆಂದು ಯಶ್ ಹೇಳಿದ್ದಾರೆ. ರಶ್ಮಿಕಾ ಅವರು ನೀಡಿದ್ದ ಹೇಳಿಕೆ ಬಗ್ಗೆ ಯಶ್ ನೀಡಿದ ಪ್ರತಿಕ್ರಿಯೆ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...