alex Certify
ಕನ್ನಡ ದುನಿಯಾ       Mobile App
       

Kannada Duniya

ಯಶ್ ಬಾಡಿಗೆ ಮನೆ ವಿವಾದ : 3 ತಿಂಗಳಲ್ಲಿ ಖಾಲಿ ಮಾಡಲು ಸೂಚನೆ

ಬೆಂಗಳೂರು: ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

ಬಾಕಿ ಉಳಿಸಿಕೊಂಡಿರುವ ಬಾಡಿಗೆ ಹಣ 9.60 ಲಕ್ಷ ರೂ. ನೀಡುವಂತೆ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಅಲ್ಲದೇ, ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

3 ತಿಂಗಳೊಳಗೆ ಬಾಕಿ ಬಾಡಿಗೆ ಪಾವತಿಸಿ ಮನೆ ಖಾಲಿ ಮಾಡುವಂತೆ ಬಾಡಿಗೆ ಕರಾರು ಮಾಡಿಕೊಂಡಿದ್ದ ಪುಷ್ಪಾ ಅವರಿಗೆ ಕೋರ್ಟ್ ಸೂಚಿಸಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...