alex Certify
ಕನ್ನಡ ದುನಿಯಾ       Mobile App
       

Kannada Duniya

ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ ಗೆ ಸಂಭ್ರಮದ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆ.ಜಿ.ಎಫ್.’ ಚಿತ್ರೀಕರಣ ಭರದಿಂದ ಸಾಗಿದೆ. ರಾಕಿಂಗ್ ಲುಕ್ ನಲ್ಲಿ ಯಶ್ ಕಾಣಿಸಿಕೊಂಡಿರುವ ಈ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಇದಾದ ಬಳಿಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಂಡಿರುವ ಯಶಸ್ವಿ ತೆಲುಗು ಚಿತ್ರ ‘ಅರ್ಜುನ್ ರೆಡ್ಡಿ’ ರಿಮೇಕ್ ನಲ್ಲಿ ಯಶ್ ನಟಿಸುವ ಸಾಧ್ಯತೆ ಇದೆ.

ವಿಜಯ್ ದೇವರಕೊಂಡ ಅಭಿನಯದ ‘ಅರ್ಜುನ್ ರೆಡ್ಡಿ’ ಯಶಸ್ವಿಯಾಗಿದ್ದು, ತಮಿಳಿನ ರಿಮೇಕ್ ಹಕ್ಕುಗಳನ್ನು ನಟ ಧನುಷ್ ಪಡೆದುಕೊಂಡಿದ್ದಾರೆ.

ಕನ್ನಡದ ಹಕ್ಕುಗಳು ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಪಾಲಾಗಿದ್ದು, ‘ಅರ್ಜುನ್ ರೆಡ್ಡಿ’ ಚಿತ್ರವನ್ನು ಕನ್ನಡದ ನೇಟಿವಿಟಿಗೆ ತಕ್ಕಂತೆ ನಿರ್ಮಿಸಲಿದ್ದಾರೆ. ಈ ರಿಮೇಕ್ ಚಿತ್ರದಲ್ಲಿ ಯಶ್ ನಟಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡ್ತಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...