alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ಪರ ‘ರಾಜಾಹುಲಿ’, ಸಿ.ಎಂ. ಪರ ‘ಹೆಬ್ಬುಲಿ’ ಪ್ರಚಾರ

ಮತದಾನದ ದಿನ ಸಮೀಪಿಸುತ್ತಿರುವಂತೆಯೇ ಹೈವೋಲ್ಟೇಜ್ ಪ್ರಚಾರ ಶುರುವಾಗಿದ್ದು, ಘಟಾನುಘಟಿ ನಾಯಕರೊಂದಿಗೆ ಬಿಗ್ ಸ್ಟಾರ್ ಗಳು ಕೂಡ ಪ್ರಚಾರಕ್ಕೆ ಮುಂದಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಪ್ರಚಾರ ನಡೆಸಿದ್ದಾರೆ. ಜೆ.ಡಿ.ಎಸ್., ಬಿ.ಜೆ.ಪಿ. ಅಭ್ಯರ್ಥಿಗಳ ಪರವಾಗಿ ಈಗಾಗಲೇ ಪ್ರಚಾರ ನಡೆಸಿರುವ ಅವರು, ಇಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಶ್ರೀರಾಮುಲು ಪರವಾಗಿ ಯಶ್ ಪ್ರಚಾರ ನಡೆಸಲಿದ್ದಾರೆ. ನಾಯಕನಹಟ್ಟಿ, ಮೊಳಕಾಲ್ಮೂರು, ರಾಂಪುರ ಮೊದಲಾದ ಕಡೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪಕ್ಷಭೇದವಿಲ್ಲದೇ, ನಿರ್ದಿಷ್ಟ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದೇನೆ ಎಂದು ಅವರು ಈಗಾಗಲೇ ತಿಳಿಸಿದ್ದಾರೆ.

ಇನ್ನು ಸಿ.ಎಂ. ಸಿದ್ಧರಾಮಯ್ಯ ಅವರ ಪರವಾಗಿ ಕಿಚ್ಚ ಸುದೀಪ್ ಪ್ರಚಾರ ನಡೆಸಲು ಒಪ್ಪಿದ್ದಾರೆ. ಸಿ.ಎಂ. ಸ್ಪರ್ಧಿಸಿರುವ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸುದೀಪ್ ಮೇ 7, 8 ರಂದು ಪ್ರಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...