alex Certify
ಕನ್ನಡ ದುನಿಯಾ       Mobile App
       

Kannada Duniya

ಖಾಸಗಿ ವಿಮಾನದಲ್ಲಿ ಶಿರಡಿಗೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಅಭಿಮಾನಿಗಳು ಬಹುಕಾಲದಿಂದ ನಿರೀಕ್ಷಿಸುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 21 ರಂದು ಕನ್ನಡವೂ ಸೇರಿದಂತೆ ಒಟ್ಟು ಏಳು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರ ಪ್ರೇಮಿಗಳಲ್ಲಿ ‘ಕೆಜಿಎಫ್’ ಅಪಾರ ನಿರೀಕ್ಷೆ ಹುಟ್ಟುಹಾಕಿದೆ.

ಮೇಕಿಂಗ್ ನಿಂದಲೇ ಗಮನ ಸೆಳೆದಿರುವ ‘ಕೆಜಿಎಫ್’ ಚಿತ್ರದ ಟ್ರೈಲರ್, ನವೆಂಬರ್ 9 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದ್ದು, ಈ ಕಾರ್ಯಕ್ರಮದಲ್ಲಿ ದೇಶದ 250 ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿರುವುದು ವಿಶೇಷ.

ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಕೆಜಿಎಫ್ ಚಿತ್ರ ಬಿಡುಗಡೆಯಾಗುವುದು ಮೊದಲೇ ನಿಶ್ಚಯವಾಗಿತ್ತಾದರೂ ಈಗ ಹಿಂದಿಯಲ್ಲೂ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಹಿಂದಿಯಲ್ಲಿ ಈ ಚಿತ್ರದ ವಿತರಣೆ ಮಾಡಲು ಖ್ಯಾತ ಬಾಲಿವುಡ್ ನಟ ಫರಾನ್ ಅಖ್ತರ್ ಮುಂದೆ ಬಂದಿದ್ದಾರೆ. ಜಪಾನ್ ಮತ್ತು ಚೀನಿ ಭಾಷೆಗಳಲ್ಲೂ ಆ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದರ ಮಧ್ಯೆ ರಾಕಿಂಗ್ ಸ್ಟಾರ್ ಯಶ್ ಖಾಸಗಿ ವಿಮಾನದಲ್ಲಿ ಶಿರಡಿಗೆ ತೆರಳಿ ಶ್ರೀ ಸಾಯಿಬಾಬರ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ಕೊಲ್ಲಾಪುರಕ್ಕೆ ತೆರಳಿ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಪ್ರಶಾಂತ್ ನೀಲ್, ಲಕ್ಕಿ ಚಿತ್ರದ ನಿರ್ದೇಶಕ ಸೂರಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಾಥ್ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...