alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಕೇಂದ್ರ ಬಜೆಟ್: ಜನ ಸಾಮಾನ್ಯರಿಗೆ ಸಿಗುತ್ತಾ ‘ಸಿಹಿ ಸುದ್ದಿ’…?

ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಐದನೇ ಬಜೆಟ್ ಇದಾಗಿದ್ದು, ಜೊತೆಗೆ ಅಧಿಕಾರಾವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗುತ್ತಿದೆ.

ಕರ್ನಾಟಕ ಸೇರಿದಂತೆ 8 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸರ್ಕಾರ, ಜನಪ್ರಿಯ ಕೊಡುಗೆಗಳನ್ನು ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ ಎಂಬ ಮಾತುಗಳು ಹಿನ್ನಲೆಯಲ್ಲಿ ಇಂದಿನ ಬಜೆಟ್ ಜನ ಸಾಮಾನ್ಯರಿಗೆ ‘ಸಿಹಿ’ ಹೊತ್ತು ತರಲಿದೆ ಎಂಬ ನಿರೀಕ್ಷೆಯಿದೆ.

ಆದಾಯ ತೆರಿಗೆ ಮಿತಿಯನ್ನು ಹೆಚ್ಚಳ ಮಾಡಬಹುದೆಂದು ಹೇಳಲಾಗಿದ್ದು, ಇದರಿಂದ ನೌಕರರು ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ. ಕೃಷಿ ಕ್ಷೇತ್ರಕ್ಕೂ ಬಜೆಟ್ ನಲ್ಲಿ ಒತ್ತು ನೀಡುವ ನಿರೀಕ್ಷೆ ಇದ್ದು, ರೈತರ ನೆರವಿಗಾಗಿ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಅರುಣ್ ಜೇಟ್ಲಿಯವರ ಇಂದಿನ ಬಜೆಟ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದ್ದು, ಯಾವ್ಯಾವ ಕ್ಷೇತ್ರಗಳಿಗೆ ಅನುಕೂಲವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...