alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 2022 ರೊಳಗೆ ಎಲ್ಲರಿಗೂ ಲಭ್ಯವಾಗಲಿದೆ ಸ್ವಂತ ಮನೆ

ಕೇಂದ್ರ ಸರ್ಕಾರ ವಸತಿ ರಹಿತರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ. 2022 ರೊಳಗೆ ದೇಶದ ಪ್ರತಿಯೊಬ್ಬರು ಮನೆ ಹೊಂದಲಿದ್ದಾರಲ್ಲದೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣಗೊಳ್ಳಲಿರುವ ಈ ಮನೆಗಳು ಕುಟುಂಬದ ಮಹಿಳೆಯರ ಹೆಸರಿನಲ್ಲಿರಲಿವೆ ಎಂದು ತಿಳಿಸಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿ ಪಕ್ಷ ಕಾಂಗ್ರೆಸ್ ಮಾಡಿದ ಆರೋಪಕ್ಕೆ ಲೋಕಸಭೆಯಲ್ಲಿ ಉತ್ತರ ನೀಡುತ್ತಿದ್ದ ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ, ನಗರ ಪ್ರದೇಶದಲ್ಲಿ ಈ ಹಿಂದೆ 18 ಮಿಲಿಯನ್ ಮನೆಗಳಿಗೆ ಇದ್ದ ಬೇಡಿಕೆ ಈಗ 11 ಮಿಲಿಯನ್ ಗೆ ಕುಸಿದಿದೆ ಎಂಬ ಅಂಕಿ ಅಂಶ ನೀಡಿದ್ದಾರೆ.

ಕಾಂಗ್ರೆಸ್ ನ ಕೆ.ಸಿ. ವೇಣುಗೋಪಾಲ್, ರಾಷ್ಟ್ರೀಕೃತ ಬ್ಯಾಂಕುಗಳ ಬಡ ಜನತೆಗೆ ಮನೆ ಕಟ್ಟಿಕೊಳ್ಳಲು ಸಾಲ ಸೌಲಭ್ಯ ನೀಡುತ್ತಿಲ್ಲ. ಇದರಿಂದಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ತಳ್ಳಿ ಹಾಕಿದ ಸಚಿವ ಹರ್ದೀಪ್ ಸಿಂಗ್ ಪುರಿ, ಯೋಜನೆ ಸಂಪೂರ್ಣ ಯಶಸ್ಸಿನತ್ತ ಸಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...