alex Certify
ಕನ್ನಡ ದುನಿಯಾ       Mobile App
       

Kannada Duniya

`ದೀಪಾವಳಿಯೊಳಗೆ ಇಳಿಕೆಯಾಗಲಿದೆ ಪೆಟ್ರೋಲ್ ಬೆಲೆ’

ದೀಪಾವಳಿಯೊಳಗೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ಮಾತನಾಡಿದ ಧರ್ಮೇಂದ್ರ ಪ್ರಧಾನ್ ಈ ವಿಷ್ಯ ತಿಳಿಸಿದ್ದಾರೆ.

ಪ್ರತಿದಿನದ ಬೆಲೆ ಪರಿಶೀಲನೆ ನಂತ್ರ ಪೆಟ್ರೋಲ್ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ. ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿವೆ. ವಿರೋಧ ಪಕ್ಷದವರ ಆರೋಪಗಳಿಗೆ ಉತ್ತರವಾಗಿ ಪ್ರಧಾನ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ದೀಪಾವಳಿ ವೇಳೆಗೆ ಅಂದ್ರೆ ಮುಂದಿನ ತಿಂಗಳೊಳಗಾಗಿ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ. ಅಮೆರಿಕಾ ಪ್ರವಾಹದಿಂದಾಗಿ ತೈಲೋತ್ಪನ್ನದಲ್ಲಿ ಶೇಕಡಾ 13ರಷ್ಟು ಇಳಿಕೆಯಾಗಿದೆ. ಇದ್ರಿಂದಾಗಿ ತೈಲ ಬೆಲೆ ಏರಿಕೆಯಾಗಿದೆ ಎಂದು ಪ್ರಧಾನ್ ಹೇಳಿದ್ದಾರೆ. ಪ್ರತಿದಿನವೂ ಇಂದನ ಬೆಲೆ ಪರಿಷ್ಕರಣೆಗೆ ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದಾದ ನಂತ್ರ ಬೆಲೆಯಲ್ಲಿ ಹೆಚ್ಚಳವಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...