alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ದಿನದಲ್ಲಿ ಚಿನ್ನ 1000 ರೂ., ಬೆಳ್ಳಿ 2000 ರೂ. ಏರಿಕೆ

gold-rate

ಬೆಂಗಳೂರು: 500 ರೂ., 1000 ರೂ. ನೋಟುಗಳ ಚಲಾವಣೆ ರದ್ದುಪಡಿಸಿರುವುದು ದೇಶಾದ್ಯಂತ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಅಮೆರಿಕ ಅಧ್ಯಕ್ಷೀಯ ಚುನಾವಣೆ ಮತ ಎಣಿಕೆ ನಡೆಯುತ್ತಿರುವುದು ಮಾರುಕಟ್ಟೆಯಲ್ಲಿ ತಲ್ಲಣಕ್ಕೆ ಕಾರಣವಾಗಿದೆ.

ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿ ಸೆನ್ಸೆಕ್ಸ್, ನಿಫ್ಟಿ ಭಾರೀ ಕುಸಿತ ಕಂಡಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನ ಪ್ರತಿ 10 ಗ್ರಾಂಗೆ ಸುಮಾರು 1000 ರೂಪಾಯಿ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 30,700 ರೂ.ನಿಂದ 31,600 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದೆ.

1 ಕೆ.ಜಿ. ಬೆಳ್ಳಿಗೆ 2000 ರೂ ಹೆಚ್ಚಳವಾಗಿ 44,520 ರೂಪಾಯಿಗೆ ತಲುಪಿದೆ. ಚಿನ್ನ, ಬೆಳ್ಳಿ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಒಂದೇ ದಿನದಲ್ಲಿ ಚಿನ್ನ ಸುಮಾರು 1,000 ರೂ., ಬೆಳ್ಳಿ 2,000 ರೂ. ಏರಿಕೆಯಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಈ ಬೆಲೆ ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಇಳಿಕೆಯಾಗಬಹುದೆಂದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...